ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಗ್ರಾಮಾಂತರ ಜಿಲ್ಲೆ: ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಯ್ಕೆಯಾಗದೇ ಖಾಲಿ ಉಳಿದಿರುವ ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮ ಪಂಚಾಯಿತಿ, 2022ರ ಅಕ್ಟೋಬರ್ ಮಾಹೆಯಲ್ಲಿ ಅವಧಿ ಮುಕ್ತಾಯವಾಗಲಿರುವ ಹೊಸಕೋಟೆ ತಾಲ್ಲೂಕಿನ ಮುತ್ಸಂದ್ರ ಗ್ರಾಮ ಪಂಚಾಯತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ನೆಲಮಂಗಲ ತಾಲ್ಲೂಕು, 02-ಯಂಟಗಾನಹಳ್ಳಿ ಗ್ರಾಮ ಪಂಚಾಯತಿಯ 11-ಬಾವಿಕೆರೆ ಕ್ಷೇತ್ರದಲ್ಲಿ ಮರಣದಿಂದ ತೆರವಾಗಿರುವ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯನ್ನು ನಡೆಸಲು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.
ಚುನಾವಣಾ ವೇಳಾಪಟ್ಟಿಯಂತೆ 2022ರ ಅಕ್ಟೋಬರ್ 13 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು, 2022ರ ಅಕ್ಟೋಬರ್ 18 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದ್ದು, ಅಕ್ಟೋಬರ್ 19 ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಅಕ್ಟೋಬರ್ 21 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಅಕ್ಟೋಬರ್ 28 ರಂದು ಮತದಾನ ಅವಶ್ಯವಿದ್ದರೆ ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮತದಾನ ನಡೆಯಲಿದೆ.
ಅಕ್ಟೋಬರ್ 30 ರಂದು ಮರು ಮತದಾನ ಅವಶ್ಯವಿದ್ದರೆ, ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಮರುಮತದಾನ ನಡೆಯಲಿದೆ. ಅಕ್ಟೋಬರ್ 31ರ ಸೋಮವಾರದಂದು ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಮತಗಳ ಏಣಿಕೆ ಕಾರ್ಯ ನಡೆಯಲಿದ್ದು, ಅಕ್ಟೋಬರ್ 31ರಂದು ಚುನಾವಣಾ ಮಾದರಿ ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ.
Also read: 90 ಲಕ್ಷ ರೂ. ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಶಾಸಕ ಹಾಲಪ್ಪ ಭೂಮಿ ಪೂಜೆ
ಚುನಾವಣಾ ನೀತಿ ಸಂಹಿತೆಯು ಅಕ್ಟೋಬರ್ 13 ರಿಂದ ಅಕ್ಟೋಬರ್ 31 ರವರೆಗೆ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅರ್.ಲತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post