ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಭದ್ರಾವತಿ |
ವಿಐಎಸ್’ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಬಂಡವಾಳ ತೊಡಗಿಸಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರಿಗೆ ನಿಯೋಗ ಮನವಿ ಮಾಡಿದೆ.
ಈ ಕುರಿತಂತೆ ಬೆಂಗಳೂರಿನ ಶಕ್ತಿ ಭವನದಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಬಿ.ಕೆ. ಸಿದ್ದರಾಮಯ್ಯ ನೇತೃತ್ವದ ನಿಯೋಗ ಚರ್ಚೆ ನಡೆಸಿತು.

ವಿಐಎಸ್’ಎಲ್ ಕಾರ್ಖಾನೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಬಂಡವಾಳ ತೊಡಗಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಕೋರಿ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಸರ್ಕಾರ 2017ರಲ್ಲಿ ಮಂಜೂರು ಮಾಡಿರುವ ಕಬ್ಬಿಣದ ಅದಿರಿನ ಗಣಿಯ ಅಭಿವೃದ್ಧಿ ಕಾರ್ಯಗಳು ವೇಗವಾಗಿ ಜರುಗುತ್ತಿದ್ದು 2025ಕ್ಕೆ ಅದಿರನ್ನು ಉತ್ಪಾದಿಸಲು ಸಿದ್ಧತೆ ಮಾಡಲಾಗುತ್ತಿದೆ. ಆದರೆ ಈ ನಡುವೆ ಕೇಂದ್ರ ಸರ್ಕಾರ ವಿಐಎಸ್’ಎಲ್ ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚಲು ತೀರ್ಮಾನ ತೆಗೆದುಕೊಂಡು ಚಾಲನೆ ನೀಡಿದೆ.
Also read: ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಡಿಸಿಎಂಗೆ ಮನವಿ
ವಿಐಎಸ್’ಎಲ್’ಗೆ ಕಬ್ಬಿಣದ ಅದಿರು ಮಂಜೂರು ಮಾಡಿದ್ದೇಆದಲ್ಲಿ ಕೇಂದ್ರ ಸರ್ಕಾರ ಬಂಡವಾಳವನ್ನು ತೊಡಗಿಸಿ ಪುನಶ್ಚೇತನಗೊಳಿಸುವುದಾಗಿ ಭರವಸೆ ನೀಡಿತ್ತು. ಕೊಟ್ಟ ಭರವಸೆಯಂತೆ ವಿಐಎಸ್’ಎಲ್ ಕಾರ್ಖಾನೆಗೆ ಸೈಲ್ ಮುಖೇನ ಸೂಕ್ತ ಬಂಡವಾಳ ತೊಡಗಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಮನವಿ ಮಾಡಲಾಯಿತು.

ಇನ್ನು, ಮನವಿ ಸ್ವೀಕರಿಸಿ, ಚರ್ಚೆ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಚಾರದಲ್ಲಿ ಕೇಂದ್ರದ ಜೊತೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಅಲ್ಲದೇ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್ ರವರಿಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸೂಚನೆ ನೀಡಿದ್ದಾರೆ.
ನಿಯೋಗದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್, ಕಾರ್ಮಿಕರ ಸಂಘದ ಅಧ್ಯಕ್ಷ ಜಗದೀಶ್, ಪ್ರಧಾನ ಕಾರ್ಯದರ್ಶಿ ಬಸಂತ್ ಕುಮಾರ್, ಕಾರ್ಯದರ್ಶಿ ಕೆ.ಆರ್. ಮನು, ಖಜಾಂಚಿ ಎಸ್. ಮೋಹನ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post