ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭದ್ರಾವತಿಯ ಹಿರಿಯ ವ್ಯಂಗ್ಯ ಚಿತ್ರಕಾರ ಹೆಚ್.ಆರ್. ಮಂಜುನಾಥ್ (ಮಂಜು) ಅವರು ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ವ್ಯಂಗ್ಯ ಚಿತ್ರಕಾರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ.
ತುಮಕೂರಿನ ಜಿ. ರಾಜನ್, ತಮ್ಮ ಮಗ ದಿ. ಜಿ. ಕೃಷ್ಣಕಾಂತ್ ಅವರ ಸ್ಮರಣಾರ್ಥ ಈ ಪ್ರಶಸ್ತಿ ನೀಡಲಾಗುತ್ತಿದ್ದು, ನ.೧೨ರಂದು ನಡೆಯಲಿರುವ ಸಂಘದ ಸರ್ವಸದಸ್ಯರ ಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಹೆಚ್.ಆರ್. ಮಂಜುನಾಥ್ ಕಿರುಪರಿಚಯ:
ಭದ್ರಾವತಿಯ ಕಬ್ಬಿಣ ಮತ್ತು ಉಕ್ಕು (ವಿಐಎಸ್‌ಎಲ್) ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಮಂಜುನಾಥ್, ಖ್ಯಾತ ವ್ಯಂಗ್ಯ ಚಿತ್ರಕಾರ ದಿ. ನಾಡಿಗ್ ಅವರ ಮಾರ್ಗದರ್ಶನ ಮತ್ತು ಪ್ರೋತ್ಸಾಹದಲ್ಲಿ ಹಲವು ವ್ಯಂಗ್ಯ ಚಿತ್ರಗಳನ್ನು ರಚಿಸಿದ್ದಾರೆ.
ಕನ್ನಡದ ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆ ಹಾಗೂ ವಿಶೇಷಾಂಕಗಳಲ್ಲಿ ಮಂಜುನಾಥ್ ಅವರ ಸಾವಿರಾರು ವ್ಯಂಗ್ಯ ಚಿತ್ರಗಳು ಪ್ರಕಟಗೊಂಡು ಜನಮನ್ನಣೆ ಗಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post