ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಭಾರೀ ಕುತೂಹಲ ಹುಟ್ಟು ಹಾಕಿದ್ದ ಹಾಸನ ಟಿಕೇಟ್ ಹೆಚ್.ಪಿ. ಸ್ವರೂಪ್ ಪಾಲಾಗಿದೆ. ಈ ಮೂಲಕ ಭವಾನಿ ರೇವಣ್ಣ ಅವರಿಗೆ ಭಾರೀ ಹಿನ್ನೆಡೆಯಾಗಿದೆ.
ಜೆಡಿಎಸ್ ನಾಯಕರಾದ ಹೆಚ್ಡಿ ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಎರಡನೇ ಪಟ್ಟಿಯಲ್ಲಿ 49 ಮಂದಿಗೆ ಟಿಕೆಟ್ ಘೋಷಿಸಲಾಗಿದೆ.
ಬಹಳ ಕುತೂಹಲ ಮೂಡಿಸಿದ್ದ ಹಾಸನ ಕ್ಷೇತ್ರದ ಟಿಕೆಟ್ ಹೆಚ್.ಪಿ. ಸ್ವರೂಪ್ ಪಾಲಾಗಿದೆ. ಭವಾನಿ ರೇವಣ್ಣಗೆ ಟಿಕೆಟ್ ಕೈತಪ್ಪಿದೆ. ಇದರ ಬೆನ್ನಲ್ಲೇ ಹಾಸನದ ಹೆಚ್.ಪಿ.ಸ್ವರೂಪ್ ನಿವಾಸದಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post