ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೂಕರ್ ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ #Bhanu Mushthak ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ #Bhukar Award ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ.
ತಮ್ಮ ಲೇಖನ, ಭಾಷಣ ಮತ್ತು ಕತೆಗಳಲ್ಲಿ ನಮ್ಮ ನೆಲದ ಮೂಲ ಸತ್ವ ಮತ್ತು ಮೂಲ ತತ್ವ ಆಗಿರುವ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಮೌಲ್ಯವನ್ನು ಮತ್ತು ಜಾತ್ಯತೀತತೆಯನ್ನು ಬೆಸೆಯುವ ಕಾರ್ಯ ಮಾಡುತ್ತಲೇ ಬರುತ್ತಿದ್ದಾರೆ. ಇವರಿಗೆ ಬೂಕರ್ ಪ್ರಶಸ್ತಿ ಬಂದಿರುವುದು ಕನ್ನಡ ಸಾಹಿತ್ಯ ಮತ್ತು ಕನ್ನಡತನದ ಹಿರಿಮೆಯನ್ನು ಹೆಚ್ಚಿಸಿದ್ದು ಪ್ರತಿಯೊಬ್ಬ ಕನ್ನಡಿಗನೂ ಹೆಮ್ಮೆ ಪಡಬೇಕಾದ ಸಂದರ್ಭ ಇದಾಗಿದೆ.

ಭಾನು ಮುಷ್ತಾಕ್ ಅವರ ಹಸೀನಾ ಮತ್ತು ಇತರ ಕೃತೆಗಳು ನನಗೆ ಬಹಳ ಇಷ್ಟವಾದ ಸಂಕಲನ. ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post