ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೀದರ್ ನಲ್ಲಿ ವರದಿ ಮಾಡಲು ಹೋಗಿದ್ದ ಪತ್ರಕರ್ತ #Journalist ರವಿ ಬಸವರಾಜ ಬೋಸುಂಡೆ ಅವರ ಮೇಲೆ ಹಲ್ಲೆ ಮಾಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ದಸ್ತಗಿರಿ ಸಾಬ ಅವರನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.
ಪತ್ರಕರ್ತನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) #KWJ ಈ ಬಗ್ಗೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿತ್ತು. ಬೀದರ್ ನಲ್ಲಿ ಸಂಘಟನೆ ಪ್ರತಿಭಟನೆಯನ್ನು ನಡೆಸಿತ್ತು. ಘಟನೆ ಬಗ್ಗೆ ಕೂಡಲೇ ಕ್ರಮಕ್ಕೆ ಮುಂದಾದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತನಿಖೆಗೆ ಆದೇಶಿಸಿದ್ದರು.
ಸಚಿವರ ಸೂಚನೆ ಮೇರೆಗೆ ಅಮಾನತ್ತು ಮಾಡಿದ ಕ್ರಮವನ್ನು ಸ್ವಾಗತಿಸಿರುವ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಇದು ಪತ್ರಕರ್ತರ ಸಾಂಘಿಕ ಹೋರಾಟಕ್ಕೆ ಸಿಕ್ಕ ಮನ್ನಣೆ ಎಂದು ಪ್ರತಿಕ್ರಿಯಿಸಿದ್ದಾರೆ. ತಪ್ಪು ಮಾಡಿದ ಹಲ್ಲೆಕೋರರಿಗೆ ಮುಂದುವರಿದ ಕ್ರಮ ಆಗಬೇಕೆಂದು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post