ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಹಕಾರ ಸಚಿವ ಕೆ.ಎನ್. ರಾಜಣ್ಣ #K N Rajanna ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಸಿದ್ದರಾಮಯ್ಯ #CM Siddaramaiah ಅವರನ್ನು ಭೇಟಿ ಮಾಡಿ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ.
ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂದು ಕೆ.ಎನ್. ರಾಜಣ್ಣ ಹೇಳಿದ್ದರು. ಅಷ್ಟೇ ಅಲ್ಲದೇ ಪಕ್ಶದ ಹಿರಿಯ ನಾಯಕರ ಎಚ್ಚರಿಕೆಯ ಹೊರತಾಗಿಯೂ ಕೆ.ಎನ್. ರಾಜಣ್ಣ ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ವಿಷಯವಾಗಿ ಪದೇ ಪದೇ ಹೇಳಿಕೆ ನೀಡುತ್ತಿದ್ದದ್ದು ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದರು.
ಇತ್ತೀಚಿನ ದಿನಗಳಲ್ಲಿ ನಾಯಕತ್ವದ ಬದಲಾವಣೆ, ಚುನಾವಣಾ ಆಯೋಗದ ವಿರುದ್ಧದ ರಾಹುಲ್ ಗಾಂಧಿ ಆರೋಪದ ಕುರಿತು ಪಕ್ಷಕ್ಕೆ ಮುಜುಗರ ಉಂಟಾಗುವ ರೀತಿಯ ಹೇಳಿಕೆಗಳನ್ನು ಕೆ.ಎನ್. ರಾಜಣ್ಣ ನೀಡುತ್ತಿದ್ದರು. ಈಗ ಹೈಕಮಾಂಡ್ ಸೂಚನೆ ಮೇರೆಗೆ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post