ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) #MUDA ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ #CM Siddaramaiah ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ #High Court ನಿರಾಕರಿಸಿದೆ.
ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ #CBI ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ.
ತೀರ್ಪಿಗೆ ಪ್ರತಿಕ್ರಿಯಿಸಿದ ಅರ್ಜಿದಾರರಾದ ಸ್ನೇಹಮಯಿ ಕೃಷ್ಣ, #Snehamayi Krishna ಇದು ತಾತ್ಕಾಲಿಕ ಹಿನ್ನಡೆಯಾಗಿದೆ. ನ್ಯಾಯಾಲಯದ ಆದೇಶ ಪ್ರತಿ ಲಭ್ಯವಾದ ನಂತರ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲ ಆರೋಪಿ ಎಂದು ಹೆಸರಿಸಲಾಗಿದ್ದು, ಅವರ ಪತ್ನಿ ಬಿಎಂ ಪಾರ್ವತಿ ಅವರನ್ನು ಎರಡನೇ ಆರೋಪಿಯನ್ನಾಗಿ ಮಾಡಲಾಗಿದೆ.
ಮೈಸೂರಿನ ಕೆಸರೆ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಪಾರ್ವತಿ #Parvathi Siddaramaiah ಅವರ ಮೂರು ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಮೈಸೂರಿನಲ್ಲಿ 14 ನಿವೇಶನಗಳನ್ನು ಪಡೆದ ಆರೋಪವಿದೆ. ಲೋಕಾಯುಕ್ತ ಪೊಲೀಸರಲ್ಲದೆ, ಜಾರಿ ನಿರ್ದೇಶನಾಲಯವೂ ಈ ಪ್ರಕರಣದಲ್ಲಿ ತನಿಖೆ ನಡೆಸುತ್ತಿದೆ.
Discussion about this post