ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ #Minister Lakshmi Hebbalkar ಅವರನ್ನು ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ಪೊಲೀಸ್ ವಶದಲ್ಲಿರುವ ಎಮ್‌ಎಲ್‌ಸಿ ಸಿ.ಟಿ. ರವಿ #MLC C T Ravi ಅವರನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್ #Highcourt ಆದೇಶ ನೀಡಿದೆ.
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನ ಸಂದರ್ಭದಲ್ಲಿ ಎಮ್‌ಎಲ್‌ಸಿ ಸಿಟಿ ರವಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿ.ಟಿ. ಅವರನ್ನು ಬೆಳಗಾವಿ ಪೊಲೀಸರು ನಿನ್ನೆ ಬಂಧಿಸಿದ್ದರು.
Also read: ಸಿ.ಟಿ. ರವಿಗೆ ಬಿಗ್ ರಿಲೀಫ್ | ಎಲ್ಲಿದ್ದಾರೋ ಅಲ್ಲಿಂದಲೇ ಬಿಡುಗಡೆ ಮಾಡಿ | ಹೈಕೋರ್ಟ್ ಆದೇಶ
ಪೊಲೀಸ್ ವಶದಲ್ಲಿರುವ ಎಮ್‌ಎಲ್‌ಸಿ ಸಿ.ಟಿ. ರವಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಎಂ.ಜಿ.ಉಮಾ ನೇತೃತ್ವದ ಪೀಠವು ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಿ. ಸಿ.ಟಿ.ರವಿ ಈಗ ಎಲ್ಲಿದ್ದಾರೋ ಅಲ್ಲಿಯೇ ಬಿಡುಗಡೆ ಮಾಡಿ ಎಂದು ಮಧ್ಯಂತರ ಆದೇಶ ನೀಡಿದ್ದಾರೆ. ಅಲ್ಲದೇ, ತನಿಖೆಗೆ ಸಹಕರಿಸಬೇಕು ಎಂದು ಸಿ.ಟಿ. ರವಿಗೆ ಷರತ್ತನ್ನು ಕೋರ್ಟ್ ವಿಧಿಸಿದೆ.
ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಸಿ.ಟಿ. ರವಿ ಅವರ ಪರವಾಗಿ ವಾದ ಮಂಡಿಸಿದ ವಕೀಲ ಅಶೋಕ್ ಹಾರನಹಳ್ಳಿ, ಆರೋಪಿಗಳಿಗೆ 7 ವರ್ಷಕ್ಕಿಂದ ಕಡಿಮೆ ಶಿಕ್ಷೆ ಇರುವ ಪ್ರಕರಣದಲ್ಲಿ 41a ನೋಟಿಸ್ ನೀಡಬೇಕಿತ್ತು. ಪೊಲೀಸರು ಬಂಧನಕ್ಕೆಕಾರಣ ನೀಡಬೇಕಿತ್ತು. ಆದರೆ, ಅದನ್ನು ನೀಡಿರುವ ಬಗ್ಗೆ ದಾಖಲೆಗಳು ಇಲ್ಲ. ಪೊಲೀಸರು ಹಲ್ಲೆ ನಡೆಸಿದ್ದರಿಂದ ಗಾಯ ಆಗಿದೆ ಎಂದು ಸಿಟಿ ರವಿ ವಕೀಲರು ಹೇಳಿದ್ದಾರೆ. ಇನ್ನು ಸಿ.ಟಿ. ರವಿ ಅವರಿಗೆ ಚಿಕಿತ್ಸೆ ನೀಡಿದ ವಿವರವನ್ನ ವೈದ್ಯಾಧಿಕಾರಿ ಸರಿಯಾಗಿ ನಮೂದಿಸಿಲ್ಲ. ಕೇವಲ ಸ್ಕ್ಯಾನಿಂಗ್ ಮಾಡಿಸಿರುವ ಬಗ್ಗೆ ವರದಿ ಇದೆ ಎಂದು ಕೋರ್ಟ್ ಮುಂದೆ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post