ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಈಗಾಗಲೇ ಹಲವು ದರಗಳ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಕೆಎಸ್’ಆರ್’ಟಿಸಿ #KSRTC ಬಸ್ ಪ್ರಯಾಣದರ ಏರಿಕೆ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಸುಳಿವು ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಹಿಂದಿನ ಬಿಜೆಪಿ ಸರ್ಕಾರ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳನ್ನು 5900 ಕೋಟಿ ರೂ.ನಷ್ಟದಲ್ಲಿಟ್ಟು ಹೋಗಿದೆ. ಈಗ ಸಾರಿಗೆ ಸಂಸ್ಥೆಗಳ ಪಾಡೇನು ಎಂಬುದರ ಬಗ್ಗೆ ತಾವು ಉತ್ತರ ನೀಡುವಿರಾ ಎಂದು ಪ್ರತಿಪಕ್ಷ ನಾಯಕ ಅಶೋಕ್ ವಿರುದ್ಧ ಕಿಡಿ ಕಾರಿದ್ದಾರೆ.
Also read: ಶಿವಮೊಗ್ಗ | ನಾಯಿ ಕಡಿತಕ್ಕೊಳಗಾಗಿದ್ದ ಮಹಿಳೆ ಸಾವು
ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದ ಆರ್. ಆಶೋಕ್, ಬಸ್ ದರ ಏರಿಕೆಗೆ ಹೊಸ ಆಯೋಗ. ಪಿಕ್ ಪಾಕೆಟ್ ಸರ್ಕಾರದ ಹೊಸ ಪ್ರಯೋಗ. ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಈಗ ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್ ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ ಎಂದಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post