ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿರುವ ಜನತೆಗೆ ರಾಜ್ಯ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು, ನಂದಿನಿ #Nandini ಪ್ಯಾಕೆಟ್ ಹಾಲಿನ ದರ ಪ್ರತಿಲೀಟರ್ ಗೆ 4 ರೂ. ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
Also read: ಗಮನಿಸಿ! ಏಪ್ರಿಲ್ 1ರ ಮಂಗಳವಾರ ತ್ಯಾವರೆಕೊಪ್ಪ ಮೃಗಾಲಯ ತೆರೆದಿರುತ್ತೆ
ನಂದಿನಿ ಹಾಲಿನ ದರ ಹೆಚ್ಚಿಸಿ ಇನ್ನೂ ವರ್ಷವಾಗಿಲ್ಲ. ಆಗಲೇ ದರ ಏರಿಕೆಗೆ ಪ್ರಸ್ತಾಪ ಬಂದಿತ್ತು. ಕೆಎಂಎಫ್ ಅಧಿಕಾರಿಗಳ ಜೊತೆ ಮೂರು ದಿನಗಳ ಹಿಂದೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ #CM Siddaramaiah ಹಾಲಿ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 4 ರೂಪಾಯಿ ಹೆಚ್ಚಿಸಿ ರಾಜ್ಯ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post