ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಾರಿಗೆ ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಹೊಸವರ್ಷಕ್ಕೆ ಶಾಕ್ ನೀಡಿದ್ದು ರಾಜ್ಯ ಸಾರಿಗೆ ನಿಗಮಕ್ಕೆ ಒಳಪಟ್ಟಿರುವ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಿಸಲು ನಿರ್ಧರಿಸಿದೆ.
Also read: ಜ.4ರಂದು ಸಹ್ಯಾದ್ರಿ ಕಲಾ ಪರಿಷತ್ ಉದ್ಘಾಟನಾ ಸಮಾರಂಭ
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ #KSRTC ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ #BMTC ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬಿಎಂಟಿಸಿ ಬಸ್ ದರಗಳನ್ನು 2014ರಲ್ಲಿ ಮತ್ತು ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಆರ್‌ಟಿಸಿಯ ದರಗಳನ್ನು 2020ರಲ್ಲಿ ಪರಿಷ್ಕರಿಸಲಾಯಿತು. ದರ ಪರಿಷ್ಕರಣೆ ನಂತರ ಡೀಸೆಲ್ ಮತ್ತು ಬಿಡಿಭಾಗಗಳ ಬೆಲೆಗಳು ಏರಿಕೆಯಾಗಿವೆ. ಜತೆಗೆ ಸಿಬ್ಬಂದಿ ವೇತನವೂ ಹೆಚ್ಚಿದೆ. ಈ ಎಲ್ಲ ಕಾರಣಗಳಿಂದ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಇತ್ತೀಚಿಗೆ ಹೇಳಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post