ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರ #State Government ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಾಲಿವುಡ್ ಸ್ಟುಡಿಯೋಗೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ತೆರೆದಿದ್ದು, ಈ ಮೂಲಕ ಬಿಗ್ ಬಾಸ್ ಶೋ ಮತ್ತೆ ಆರಂಭವಾಗಿದೆ.
ಡಿಸಿಎಂ ಶಿವಕುಮಾರ್ #DCM Shivakumar ಹಾಗೂ ರಾಜ್ಯ ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಶೋವನ್ನು ಮತ್ತೆ ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ 17 ಸ್ಪರ್ಧಿಗಳು ಬಿಗ್ ಬಾಸ್’ಗೆ #BIG BOSS ಮರಳಿದ್ದು, ಆಟ ಮತ್ತೆ ಆರಂಭಗೊAಡಿದೆ.

ಪ್ರೋಮೋದಲ್ಲಿ ಖಾಲಿ ಇರುವ ಬೆಡ್ ರೂಂ, ಕಿಚನ್, ಲಿವಿಂಗ್ ರೂಂ, ಹೊರಗಡೆಯ ಏರಿಯಾಗಳನ್ನು ತೋರಿಸಲಾಗಿದ್ದು, ಕೊನೆಯಲ್ಲಿ ಎಂದಿನಂತೆ ಅದೇ ಸಮಯದಲ್ಲಿ, ಬಿಗ್‌ಬಾಸ್ ಕನ್ನಡ ರಾತ್ರಿ 9:30ಕ್ಕೆ ಪ್ರಸಾರ ಧ್ವನಿಯಲ್ಲಿ ತಿಳಿಸಲಾಗಿದೆ.
ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋ ಪರಿಸರದ ನಿಯಮಗಳನ್ನು ಪಾಲಿಸಿರಲಿಲ್ಲ. ಹಾಗೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್’ಗೆ ಪ್ರತಿಕ್ರಿಯೆ ಕೂಡ ನೀಡಿರಲಿಲ್ಲ ಎಂದು ಆರೋಪಿಸಲಾಗಿತ್ತು.

ಘಟನೆ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಡಿ.ಕೆ. ಶಿವಕುಮಾರ್, ಬಿಗ್ ಬಾಸ್ ಕಾರ್ಯಕ್ರಮದ ನಿರ್ಮಾಣ ಸಂಸ್ಥೆಯಾದ ಜಾಲಿವುಡ್ ಸ್ಟುಡಿಯೋಸ್’ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಬಿಗ್ ಬಾಸ್’ಗೆ ಹಾಕಲಾಗಿದ್ದ ಬೀಗವನ್ನು ತೆಗೆಯಲಾಗಿದ್ದು, ಆಟಗಾರರು ಮರಳಿ ತೆರಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post