ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು, ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಸಿದ್ದರಾಮಯ್ಯ ಅವರು ಕನಸು ಕಾಣುತ್ತಿದ್ದಾರೆ ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಎಲ್ಲಿದೆ. ದೇಶದಲ್ಲಿ ಕಾಂಗ್ರೆಸ್ ಸೋತು ಸುಣ್ಣಾಗಿದೆ ಹಾಗೂ ರಾಜ್ಯದಲ್ಲೂ ಕಾಂಗ್ರೆಸ್ ನೆಲಕಚ್ಚಿ ಹೋಗಿದೆ ಎಂದು ಹೇಳಿದ್ದಾರೆ.
ಡಿಸಿಎಂ ಆಗಲಿ, ಸಚಿವ ಆಗಲಿ ಕೆಲಸ ಮಾಡೋದು ಮುಖ್ಯ. ಸಚಿವ ಸ್ಥಾನ ಸಿಗದವರನ್ನು ಕರೆದು ಮಾತನಾಡಿಸಿ ಸಮಾಧಾನ ಮಾಡುವ ಕೆಲಸ ಮಾಡುತ್ತೇವೆ. ಬಿ.ಎಸ್. ಯಡಿಯೂರಪ್ಪ ಕುಟುಂಬಕ್ಕೆ ಸ್ಥಾನ ಮಾನ ಕೊಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post