ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪಂಚ ರಾಜ್ಯಗಳ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಕರ್ನಾಟಕ ಸೇರಿದಂತೆ 5 ರಾಜ್ಯಗಳ ಚುನಾವಣೆ 2023 ರ ಮಾರ್ಚ್ – ಏಪ್ರಿಲ್ ನಲ್ಲಿ ನಡೆಯಲಿದ್ದು ಫೆಬ್ರವರಿ ತಿಂಗಳಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್, ಜೆಡಿಎಸ್ ಗದ್ದುಗೆ ಏರುವ ಹುಮ್ಮಸ್ಸಿನಲ್ಲಿರುವಾಗಲೇ ಬಿಜೆಪಿ ದಕ್ಷಿಣ ಭಾರತದ ತನ್ನ ಹೆಬ್ಬಾಗಿಲಾಗಿರುವ ಕರ್ನಾಟಕವನ್ನು ಈ ಬಾರಿ ಸಂಪೂರ್ಣ ಹತೋಟಿಗೆ ತೆಗೆದುಕೊಳ್ಳುವ ಯೋಜನೆ ರೂಪಿಸಿದೆ.
ಇಷ್ಟು ದಿನ ರಾಜ್ಯ ಬಿಜೆಪಿಗೆ ತಲೆ ನೋವಾಗಿದ್ದ 40% ಕಮಿಷನ್, ಪೇ ಸಿ. ಎಂ ಅಭಿಯಾನಗಳಿಗಿಂತ ಹೆಚ್ಚಾಗಿ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಕರ್ನಾಟಕದ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿರುವುದು ನುಂಗಲಾರದ ತುತ್ತಾಗಿದೆ. ಮಲ್ಲಿಕಾರ್ಜುನ ಖರ್ಗೆ ಆಯ್ಕೆ ಕರ್ನಾಟಕದ ಚುನಾವಣೆಯ ಮೇಲೆ ಬಹುದೊಡ್ಡ ಪ್ರಭಾವ ಬೀರುವ ಸಾಧ್ಯತೆ ಇದ್ದು, ಇನ್ನೊಂದೆಡೆ ಜೆಡಿಎಸ್ ಕೂಡ ಈಗಾಗಲೇ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವುದು ಮತ್ತೊಂದು ಸವಾಲಾಗಿದೆ. ಹಾಗಾಗಿಯೇ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಸರ್ಜರಿಗೆ ಇಳಿದಿದೆ.











Discussion about this post