ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸೋಲಿನ ಭಯದಲ್ಲಿ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಭರವಸೆ ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಬ್ರಿಟೀಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಇರುವ ಪಕ್ಷ ಕಾಂಗ್ರೆಸ್. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ ಎಂದರು.

Also read: Belagavi has received a good response in all the surveys we have conducted: CM Siddaramaiah
ಕಾಂಗ್ರೆಸ್ ಪಕ್ಷ ಚುನಾವಣೆ ನಡೆಸದಂತೆ ಬಿಜೆಪಿ ಈ ರೀತಿಯ ತೊಂದರೆ ಕೊಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಇದು ಖಂಡನೀಯ ಎಂದರು.

ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ. ಹೀಗಾಗಿ ಬಿಜೆಪಿಗೆ ಅಸಮಾನತೆ ಇರಬೇಕು, ಜಾತಿ ವ್ಯವಸ್ಥೆ ಗಟ್ಟಿಯಾಗಬೇಕು, ನಿರುದ್ಯೋಗ ಹೆಚ್ಚಾಗಬೇಕು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬಾರದು. ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬಾರದು ಎನ್ನುವ ಮನಸ್ಥಿತಿ ಬಿಜೆಪಿಯದ್ದಾಗಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಣ ಇಲ್ಲದಂತೆ ಮಾಡಲು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಲಾಗಿದೆ ಎಂದರು.
ಸಿಎಎ, ಪುಲ್ವಾಮಾ, ಅಯೋಧ್ಯೆ ಹೆಸರಲ್ಲಿ ಇನ್ನೂ ಎಷ್ಟು ವರ್ಷ ಭಾರತೀಯರನ್ನು ಭಾವನಾತ್ಕವಾಗಿ ಮರಳು ಮಾಡ್ತೀರಿ? ಜನರ ಬದುಕಿನ ಸಮಸ್ಯೆಗಳಿಗೆ ನೆಪಕ್ಕೂ ಸ್ಪಂದಿಸದ ನೀವು ಕೇವಲ ಭಾವನಾತ್ಮಕವಾಗಿ ಕೆರಳಿಸುತ್ತಾ ಇದ್ದೀರಿ. ಆದರೆ ಭಾರತದ ಜನತೆ ನಿಮ್ಮನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದರು.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post