No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮೇಕೆದಾಟು ಯೋಜನೆ ಬಗ್ಗೆ ಬಿಜೆಪಿ ದ್ವಂದ್ವ ನೀತಿ: ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 13, 2021
in ಬೆಂಗಳೂರು ನಗರ
0
ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಆಡಳಿತಾರೂಢ ಬಿಜೆಪಿ ಎರಡು ನಾಲಿಗೆಗಳಿಂದ ಮಾತನಾಡುತ್ತಿದೆ. ತಮಿಳುನಾಡಿನ ಬಿಜೆಪಿ ಈ ಯೋಜನೆಯನ್ನು ವಿರೋಧಿಸುತ್ತಿದೆ, ಆ ನಿಲುವನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಕೂಡಾ ಬೆಂಬಲಿಸುತ್ತಿದ್ದಾರೆ. ಯಾಕೆ ಈ ದಂದ್ವನೀತಿ? ಎಂದು ಪ್ರಶ್ನಿಸಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಈ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ತಳೆದಿರುವ ಗಟ್ಟಿನಿಲುವಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಆದರೆ ತಮ್ಮ ಸಡಿಲ ನಾಲಿಗೆಯ ಮೂಲಕ ಒಂದಲ್ಲ ಒಂದು ವಿವಾದ ಸೃಷ್ಟಿಸುತ್ತಿರುವ ಸಿ.ಟಿ. ರವಿ ಅವರಂತಹ ಕೂಗುಮಾರಿಗಳ ಬಾಯಿ ಮುಚ್ಚಿಸದೆ ಹೋದರೆ ಅನಗತ್ಯವಾಗಿ ಇದೊಂದು ಆಂತರಿಕ ವಿವಾದವಾಗಿ ನಾವುನಾವೇ ಕಚ್ಚಾಡುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಸಿದ್ದಾರೆ.
ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ಎಂಬ ರಾಷ್ಟ್ರಕವಿ ಕುವೆಂಪು ಅವರ ಕವನದ ಸಾಲುಗಳೇ ನಮ್ಮ ರಾಷ್ಟ್ರೀಯತೆಯ ವ್ಯಾಖ್ಯಾನ. ಕಾಂಗ್ರೆಸ್ ಪಕ್ಷ ಇದನ್ನು ನಂಬಿದೆ. ಈ ಬಗ್ಗೆ ಬಿಜೆಪಿಗೆ ಭಿನ್ನಾಭಿಯ ಹೊಂದಿದ್ದರೆ ಅದನ್ನು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು. ನಾವು ಕೂಡಾ ಭಾರತೀಯರು, ಇದಕ್ಕಾಗಿ ರಾಜ್ಯದ ಹಿತಾಸಕ್ತಿ ಕಡೆಗಣಿಸಲು ಸಾಧ್ಯ ಇಲ್ಲ. ನೆಲ-ಜಲ-ಭಾಷೆ ವಿಚಾರದಲ್ಲಿ ನಮ್ಮ ಪಕ್ಷ ರಾಜಕೀಯ ಮಾಡಲು ಹೋಗುವುದಿಲ್ಲ, ಯಾವ ಬಗೆಯ ರಾಜಿಯನ್ನೂ ಮಾಡುವುದಿಲ್ಲ. ಅಧಿಕಾರದಲ್ಲಿರಲಿ, ಇಲ್ಲದೆ ಇರಲಿ ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಮುಖ್ಯಮಂತ್ರಿಗಳು ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅದೇ ರೀತಿ ತಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಬೇಕು ಎಂದಿದ್ದಾರೆ.

ಮೇಕೆದಾಟು ಯೋಜನೆಯ ವಿಚಾರದಲ್ಲಿ ಕಣ್ಣುಮುಚ್ಚಾಲೆ ಆಟ ಆಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿ ನ್ಯಾಯದ ಪರವಾದ ಗಟ್ಟಿನಿಲುವು ತೆಗೆದುಕೊಳ್ಳಬೇಕು. ಅನಗತ್ಯ ತಕರಾರು ತೆಗೆಯುತ್ತಿರುವ ತಮಿಳುನಾಡು ಸರ್ಕಾರಕ್ಕೆ ಬಿಗಿಮಾತಿನಿಂದ ಬುದ್ದಿ ಹೇಳಬೇಕು. ಮಹದಾಯಿ ಯೋಜನೆಯ ವಿಚಾರದಲ್ಲಿಯೂ ಕೇಂದ್ರ ಸರ್ಕಾರದ ತಳೆದ ದಂದ್ವ ನಿಲುವು ರಾಜ್ಯದ ಹಿತಾಸಕ್ತಿಗೆ ಮಾರಕವಾಯಿತು ಎಂದರು.

ಕಾವೇರಿ ನ್ಯಾಯಮಂಡಳಿಯ ಐತೀರ್ಪು ಮತ್ತು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಕಾವೇರಿ ಜಲವಿವಾದ ಇತ್ಯರ್ಥವಾಗಿದೆ. ಪ್ರಕೃತಿಯ ಕೃಪೆಯಿಂದ ಕಳೆದೆರಡು ವರ್ಷಗಳಲ್ಲಿ ನದಿನೀರು ಹಂಚಿಕೆಯಲ್ಲಿ ಯಾವುದೇ ವ್ಯತ್ಯಯವಾಗದೆ ತಮಿಳುನಾಡಿಗೆ ಅದರ ಪಾಲಿನ ನೀರು ಹರಿದಹೋಗುತ್ತಿದೆ. ಈ ಸ್ಥಿತಿಯಲ್ಲಿ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಕ್ಯಾತೆ ತೆಗೆಯುವುದು ಸರಿ ಅಲ್ಲ. ಕೆಆರ್’ಎಸ್ ಜಲಾಶಯದಿಂದ ಅನಿಯಂತ್ರಿತವಾಗಿ ಸಮುದ್ರಕ್ಕೆ ಹರಿದುಹೋಗುತ್ತಿರುವ ನೀರಿನಲ್ಲಿ 64 ಟಿಎಂಸಿ ನೀರನ್ನು ಬಳಸಿಕೊಂಡು ರೂಪಿಸಲಾಗಿರುವ ಮೇಕೆದಾಟು ಯೋಜನೆಯ ಮೊದಲ ಪ್ರಸ್ತಾವವವನ್ನು 2013ರಲ್ಲಿ ನಮ್ಮ ಸರ್ಕಾರ ಸಲ್ಲಿಸಿತ್ತು. 2019೯ರಲ್ಲಿ ನಮ್ಮದೇ ಸಂಯುಕ್ತ ಸರ್ಕಾರ ಈ ಯೋಜನೆಗೆ ಚಾಲನೆ ನೀಡಿತ್ತು. ನಮ್ಮ ಪಕ್ಷ ಈ ಯೋಜನೆಗೆ ಬದ್ಧವಾಗಿದೆ ಎಂದಿದ್ದಾರೆ.

ಮೇಕೆದಾಟು ಯೋಜನೆಯಿಂದ ತಮಿಳುನಾಡಿನ ರೈತರಿಗೆ ಯಾವ ಹಾನಿಯೂ ಇಲ್ಲ. ತಮಿಳುನಾಡಿನ ಈಗಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಒಬ್ಬ ಪ್ರಬುದ್ಧ ರಾಜಕಾರಣಿ. ಅವರು ಹಿಂದಿನ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಬಾರದು. ನೆರೆರಾಜ್ಯಗಳ ಜೊತೆ ಸೌಹಾರ್ದಯುತ ಸಂಬಂಧವನ್ನು ಉಳಿಸಿ-ಬೆಳೆಸಿಕೊಂಡು ಹೋಗಬೇಕು ಎಂದು ತಿಳಿಸಿದ್ದಾರೆ.

ಮೇಕೆದಾಟು ಮೂಲಭೂತವಾಗಿ ಬೆಂಗಳೂರು-ಮೈಸೂರು ನಗರಗಳಿಗಾಗಿ ರೂಪಿಸಿರುವ ಕುಡಿಯುವ ನೀರಿನ ಯೋಜನೆ. ಬೆಂಗಳೂರಿನಲ್ಲಿ ಕೇವಲ ಕನ್ನಡಿಗರು ಮಾತ್ರವಲ್ಲ ತಮಿಳು ಭಾಷಿಕರು ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳ ಜನರಿದ್ದಾರೆ. ಇಂತಹ ಕುಡಿಯುವ ನೀರು ಪೂರೈಸುವ ಯೋಜನೆಗೆ ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕಾಗಿ ವಿರೋಧ ವ್ಯಕ್ತಪಡಿಸುವುದು ಸರಿ ಅಲ್ಲ. ತಮಿಳುನಾಡು ಸರ್ಕಾರ ಕೂಡಾ ಕಾವೇರಿ ಜಲಾನಯನ ಪ್ರದೇಶದಲ್ಲಿ ಎರಡು ಜಲವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದೆ. ಅವುಗಳನ್ನು ಕರ್ನಾಟಕ ವಿರೋಧಿಸಿಲ್ಲ. ಪ್ರಾಕೃತಿಕ ಸಂಪತ್ತನ್ನು ಹಂಚಿಕೊಂಡು ಬೆಳೆಯಬೇಕು ಎನ್ನುವುದು ನಮ್ಮ ನಿಲುವು. ತಮಿಳುನಾಡು ಹಟಹಿಡಿದು ಮೇಕೆದಾಟು ಯೋಜನೆಯನ್ನು ವಿರೋಧಿಸಿದರೆ ರಾಜಕೀಯ ಸಂಘರ್ಷ ಅನಿವಾರ್ಯವಾಗಬಹುದು ಎಂದಿದ್ದಾರೆ.
(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteLatest News KannadaMekedatuNews in KannadaNews KannadaSiddaramaiahState Newsಬೆಂಗಳೂರುಮೇಕೆದಾಟು ಯೋಜನೆಸಿದ್ದರಾಮಯ್ಯ
Share206Tweet123Send
Previous Post

ಮಾಸ್ಕ್ ಧರಿಸದವರಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಚಳ್ಳಕೆರೆ ಪೊಲೀಸರು

Next Post

ರಾಷ್ಟ್ರೀಯ ನಾಯಕರ ಟೀಕೆ: ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

ರಾಷ್ಟ್ರೀಯ ನಾಯಕರ ಟೀಕೆ: ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL