ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬ್ಲಾಕ್ ಮೇಲ್, ಸುಲಿಗೆ ಆರೋಪ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ನಿರೂಪಕಿ ದಿವ್ಯಾ ವಸಂತ #Divya Vasanth ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆ ಮರೆಸಿಕೊಂಡಿದ್ದ ದಿವ್ಯಾ ವಸಂತ ಮೊದಲು ತಮಿಳುನಾಡಿನಲ್ಲಿದ್ದಾರೆ ಎಂದು ತಿಳಿದುಬಂದಿತ್ತು. ಆ ನಂತರ ಕೇರಳದಲ್ಲಿದ್ದಾರೆ ಎಂಬ ಮಾಹಿತಿಯ ಆಧಾರದಲ್ಲಿ ಅಲ್ಲಿಗೆ ತೆರಳಿದ ಜೀವನ್ ಭೀಮಾನಗರ ಪೊಲೀಸರು ಆಕೆಯನ್ನು ಬಂಧಿಸಿ ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
Also read: ಲೋಕಾಯುಕ್ತ ಭರ್ಜರಿ ಬೇಟೆ: ಏಕಕಾಲದಲ್ಲಿ ರಾಜ್ಯದ 11 ಅಧಿಕಾರಿಗಳ ಮನೆಯಲ್ಲಿ ಕಾರ್ಯಾಚರಣೆ
ದಿವ್ಯ ವಸಂತ ಮತ್ತು ಗ್ಯಾಂಗ್’ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಯತ್ನ ಪ್ರಕರಣ ಇದಾಗಿದೆ. ಈ ಪ್ರಕರಣದಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.
ಆನಂತರ ಕೇರಳದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ಜೀವನ್ ಭೀಮಾ ನಗರ ಪೊಲೀಸರು ಆಕೆಯನ್ನು ಬಂಧಿಸಿ, ಬೆಂಗಳೂರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post