ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಭೀಕರ ಸ್ಫೋಟ ಸಂಭವಿಸಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರ ದೇಹವೇ ಛಿದ್ರ ಛಿದ್ರವಾದ ಘಟನೆ ನಡೆದಿದೆ.
ವೈಯಾಲಿ ಕಾವಲ್’ನಲ್ಲಿರುವ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಇಂದು ಮುಂಜಾನೆ ಸ್ಫೋಟ ಸಂಭವಿಸಿದ್ದು, ಯಾವ ರೀತಿಯ ಸ್ಫೋಟ ಎಂದು ಇನ್ನೂ ತಿಳಿದುಬಂದಿಲ್ಲ.
ವರದಿಗಳ ಅನ್ವಯ ಸಿಲಿಂಡರ್ ಸ್ಪೋಟ ಎಂದು ಹೇಳಲಾಗಿದ್ದು, ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಅಗ್ನಿ ಶಾಮಕ ದಳ ಭೇಟಿ ನೀಡಿದೆ.

















