ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ಶಕ್ತಿ ಕೇಂದ್ರಗಳಲ್ಲಿ ಒಂದಾದ ರಾಜಭವನಕ್ಕೆ Rajabhavan ಬಾಂಬ್ ಬೆದರಿಕೆ ಕರೆ ಬಂದಿರುವ ಹಿನ್ನೆಲೆ ಸ್ಥಳದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಇತ್ತೀಚೆಗಷ್ಟೇ ಬೆಂಗಳೂರಿನ ಹಲವು ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಕರೆ ಬಂದ ಸುದ್ಧಿ ಹಸಿರಾಗಿರುವಾಗಲೇ ರಾಜಭವನದಲ್ಲಿ ಬಾಂಬ್ ಇಡಲಾಗಿದೆ ಎಂದು ಸೋಮವಾರ ರಾತ್ರಿ ಕರೆ ಮಾಡಿ ತಿಳಿಸಲಾಗಿದೆ. ರಾತ್ರಿ ೧೧.೩೦ರ ಸುಮಾರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಹೇಳಿದ್ದಾನೆಂದು ತಿಳಿದುಬಂದಿದೆ.
ಬೆದರಿಕೆ ಕರೆ ಬಂದ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಪೊಲೀಸರು ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್‌ನೊಂದಿಗೆ ಅಲ್ಲಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ. ಆದರೆ, ಸ್ಥಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಅನಾಮಧೇಯ ಕರೆ ಮಾಡಿದ ವ್ಯಕ್ತಿಯ ಜಾಡು ಹಿಡಿದಿರುವ ಪೊಲೀಸರು ತನಿಖೆ ಚುರುಕುಗೊಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ರಾಜಭವನದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post