ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ರಾಜಧಾನಿಯ ಸುಮಾರು 15 ಶಾಲೆಗಳಿಗೆ ಬಾಂಬ್ ಬೆದರಿಕೆ Bomb threats to school ಬಂದಿದ್ದು, ಎಲ್ಲ ಶಾಲೆಗಳ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ, ಶಾಲೆಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ.
ಈ ಹಿಂದೆಯೂ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಅದರೆ, ಈ ಬಾರಿ 15ಕ್ಕೂ ಅಧಿಕ ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ.

ವಿಷಯ ತಿಳಿದು ಶಾಲೆಗಳಿಗೆ ಪೊಲೀಸರು ಭೇಟಿ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ. ಅಲ್ಲದೆ, ಈ ವಿಷಯ ತಿಳಿದ ಪೋಷಕರು ಶಾಲೆಗಳಿಗೆ ದೌಡಾಯಿಸಿದ್ದಾರೆ.

ಕಳೆದ ವರ್ಷವೂ ಬೆಂಗಳೂರು ನಗರದ ನಾಲ್ಕು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಅಂದು ಕೂಡ ಇ-ಮೇಲ್ ಮಾಡಿದ್ದ ಆಗಂತುಕರು, ನಿಮ್ಮ ಶಾಲೆಯಲ್ಲಿ ಶಕ್ತಿಶಾಲಿ ಬಾಂಬ್ ಇರಿಸಲಾಗಿದೆ ಎಂದಿದ್ದರು.










Discussion about this post