ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿರುವ ದೇವಾಲಯ ಹಾಗೂ ಮಠಗಳ ಅಭಿವೃದ್ಧಿಗಾಗಿ ಸರ್ಕಾರ ಬರೋಬ್ಬರಿ ಒಂದು ಸಾವಿರ ಕೋಟಿ ರೂ.ಗಳ ಅನುದಾನವನ್ನು ಮೀಸಲಿಟ್ಟಿದೆ.
ತಮ್ಮ ಬಜೆಟ್ ಭಾಷಣದಲ್ಲಿ ಈ ವಿಚಾರನ್ನು ಘೋಷಣೆ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು, ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ ಎಂದಿದ್ದಾರೆ.
ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.
Also read: ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸದಸ್ಯರು ಕಿವಿ ಮೇಲೆ ಹೂವಿಟ್ಟು ಕುಳಿತಿದ್ದು ಯಾಕೆ?
ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನವನ್ನು 48,000 ರೂ. ಗಳಿಂದ 60,00 ರೂ. ಗಳಿಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,71 ಸಂಸ್ಥೆಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















