ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಲೈಂಗಿಕನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರು ಮೇ 31ಕ್ಕೆ ವಾಪಸ್ ಆಗಲಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿಗೆ ಹಿಂದಿರುಗಲು ಈಗಾಗಲೇ ಮ್ಯೂನಿಚ್‌ನಿಂದ ಪ್ರಜ್ವಲ್ ರೇವಣ್ಣ ಅವರು ಲುಫ್ತಾನ್ಸಾ ಏರ್‌ಲೈನ್ಸ್ ಬುಕ್ ಮಾಡಿದ್ದಾರೆ ಎನ್ನಲಾಗಿದ್ದು, ಮೇ 31ರ ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿಗೆ ಬರ್ತಿದ್ದಂತೆ ಏರ್ ಪೋರ್ಟ್‍ನಲ್ಲೇ ಎಸ್‍ಐಟಿ ಅಧಿಕಾರಿಗಳು ಬಂಧಿಸಲು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.
Also read: ಪರಿಷತ್ ಚುನಾವಣೆ: ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ
ಅಶ್ಲೀಲ ವೀಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಸೋಮವಾರವಷ್ಟೇ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್ ರೇವಣ್ಣ ಕ್ಷಮೆ ಕೇಳಿದ್ದರು. ಅದರಲ್ಲಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ ಎಂದು ಮಾಹಿತಿ ನೀಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























