ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬ್ರಾಹ್ಮಣ ಸಮಾಜವನ್ನು 43 ಉಪಪಂಗಡಗಳನ್ನಾಗಿ ವಿಂಗಡಿಸಿ, ವಿಪ್ರ ಸಮಾಜಕ್ಕೆ ಸರ್ಕಾರದ ಸೌಲಭ್ಯಗಳನ್ನು ತಡೆ ಹಿಡಿಯುವ ಕಾಂತರಾಜ ಜಾತಿ ಗಣತಿ ವರದಿಯಲ್ಲಿ ಸರ್ಕಾರ ತಿರಸ್ಕರಿಸದೇ ಇದ್ದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ವಿಪ್ರ ಸಮಾಜದ ಎಚ್ಚರಿಕೆ ನೀಡಿದೆ.
ಕಾಂತರಾಜ ಆಯೋಗದ ವರದಿ ತಮ್ಮ ಸರ್ಕಾರ ಸ್ವೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವ ಹಿನ್ನೆಲೆಯಲ್ಲಿ ವಿಶ್ವ ವಿಪ್ರತೃಯಿ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯದಾದ್ಯಂತ ಇರುವ ಬ್ರಾಹ್ಮಣ ಸಂಘಟನೆಗಳ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
ಸಭೆಯ ನಿರ್ಣಯಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡ ನಿವೃತ್ತ ನ್ಯಾಯಮೂರ್ತಿ ಎನ್. ಕುಮಾರ್, ಜಾತಿ ಗಣತಿಯಲ್ಲಿ ಬ್ರಾಹ್ಮಣರನ್ನು 43 ಉಪ ಪಂಗಡಗಳಾಗಿ ವಿಂಗಡಿಸಿ, ಮೀಸಲಾತಿ ಸೇರಿದಂತೆ ಸರ್ಕಾರದ ಸೌಲಭ್ಯಗಳು ವಿಪ್ರ ಸಮಾಜಕ್ಕೆ ಹಿಡಿದಿರುವಂತೆ ಮಾಡುವ ಹುನ್ನಾರ ನಡೆದಿದೆ. ಬ್ರಾಹ್ಮಣರನ್ನು ಒಂದೇ ಶೀರ್ಷಿಕೆ ಅಡಿಯಲ್ಲಿ ನಮೂದಿಸಿ, ಒಟ್ಟು ಸಂಖ್ಯೆ ಪ್ರಕಟಿಸಬೇಕು. ಇಲ್ಲವಾದರೆ ಕಾಂತರಾಜ ಆಯೋಗದ ಜಾತಿ ಗಣತಿ ವರದಿಯನ್ನು ತಿರಸ್ಕರಿಸುವಂತೆ ಆಗ್ರಹಿಸಿ ಹೋರಾಟ ನಡೆಸುವುದಾಗಿ ಹೇಳಿದರು.
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಮಾತನಾಡಿ, ರಾಜ್ಯ ಸರ್ಕಾರ ಕಾಂತರಾಜ ಆಯೋಗದ ಜಾತಿ ಗಣತಿ ವರದಿಯನ್ನು ಪರಿಷ್ಕರಣೆ ಮಾಡಬೇಕು. ಉಪ ಪಂಗಡಗಳಾಗಿ ವಿಂಗಡಿಸಿರುವ ಬ್ರಾಹ್ಮಣ ಸಂಖ್ಯೆ ತೀರಾ ಕಡಿಮೆ ಎಂದು ತೋರಿಸುವ ದುರುದ್ದೇಶ ಈ ವರದಿಯ ಹಿಂದೆ ಇದೆ. ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ, ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದಿನ ಆಡಳಿತ ಅವಧಿಯಲ್ಲಿ ಕೈಗೊಳ್ಳಲಾಗಿದ್ದ ಕಾಂತರಾಜ ಜಾತಿ ಗಣತಿ ವರದಿಯ ವಿರುದ್ಧ ಬ್ರಾಹ್ಮಣ ಸಮಾಜ ಒಮ್ಮತದಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
Also read: ಶಿವಮೊಗ್ಗ | ಹಾಡಹಗಲೇ, ಜನನಿಬಿಡ ಪ್ರದೇಶದಲ್ಲಿ ಮಹಿಳೆಯ ಅಪಹರಣ | ಪತಿಯಿಂದಲೇ ಕೃತ್ಯ?
ವಿಪ್ರತೃಯಿ ಪರಿಷತ್ ಅಧ್ಯಕ್ಷ ರಘುನಾಥ್ ಹಾಗೂ ಬಬ್ಬೂರು ಕಮ್ಮೆ ಬ್ರಾಹ್ಮಣ ಸಂಘದ ಅಧ್ಯಕ್ಷ ಎಂ.ವಿ. ಪ್ರಸನ್ನ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post