ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಟವಾಡುತ್ತಿದ್ದ ಅಣ್ಣ-ತಂಗಿ ಇಬ್ಬರೂ ಆಕಸ್ಮಿಕವಾಗಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಕೆಂಗೇರಿಯಲ್ಲಿ ನಡೆದಿದೆ.
ಮೃತ ಮಕ್ಕಳನ್ನು ಶ್ರೀನಿವಾಸ್(13) ಹಾಗೂ ಲಕ್ಷ್ಮಿ(11) ಎಂದು ಗುರುತಿಸಲಾಗಿದೆ.
ಕೆಂಗೇರಿ ಕೆರೆಯಲ್ಲಿ ಮಕ್ಕಳು ಬಿದ್ದಿರುವ ಶಂಕೆ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ಆರಂಭ ಮಾಡಿದ್ದರು.
Also read: ಹಾವೇರಿ | ಹೃದಯವಿದ್ರಾವಕ ಘಟನೆ | ಹೃದಯಾಘಾತದಿಂದ ತಂದೆ-ಮಗ ಒಂದೇ ದಿನ ಸಾವು
ಸುಮಾರು 3 ಗಂಟೆಗಳಿಂದ ಸತತ ಕಾರ್ಯಾಚರಣೆ ನಡೆಸಿ, ಅಣ್ಣನ ಮೃತ ದೇಹ ಪತ್ತೆ ಹಚ್ಚಿದ್ದಾರೆ. ಆದರೆ ತಂಗಿಯ ಮೃತದೇಹಕ್ಕಾಗಿ ಕಾರ್ಯಚರಣೆ ಸಂಜೆಯವರೆಗೂ ಮುಂದುವರೆದಿತ್ತು.
ಕೆಂಗೇರಿ ಕೆರೆ ಪಕ್ಕದ ಬಡಾವಣೆಯಲ್ಲಿ ವಾಸವಾಗಿರುವ ನಾಗಮ್ಮ ಎಂಬುವರ ಮಕ್ಕಳಾದ ಶ್ರೀನಿವಾಸ್ ಮತ್ತು ಲಕ್ಷ್ಮೀ ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಕೆಂಗೇರಿ ಕೆರೆಗೆ ನೀರು ತರಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post