ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚುನಾವಣೆಗೂ ಮುನ್ನ ಮಂಡನೆಯಾಗಿರುವ ರಾಜ್ಯ ಬಿಜೆಪಿ ಸರ್ಕಾರದ ಬಜೆಟ್’ನಲ್ಲಿ ಎಲ್ಲ ಸಮುದಾಯದ ಮತಗಳನ್ನು ಸೆಳೆಯುವ ತಂತ್ರಗಾರಿಗೆ ಅನುಸರಿಸಿದ್ದು, ಇದರಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಲಾಗಿದೆ.
ತಮ್ಮ ಬಜೆಟ್ ಭಾಷಣದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಾಲು ಸಾಲು ಯೋಜನೆ ಹಾಗೂ ಅನುದಾನಗಳನ್ನು ಘೋಷಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, CM Basavaraja Bommai ರಾಜ್ಯದ ಜನರ ಆರೋಗ್ಯ ಭಾಗ್ಯವೇ ನಮಗೆ ಮುಖ್ಯ. ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ ಎಂಬ ಧ್ಯೇಯದೊಂದಿಗೆ ಆರೋಗ್ಯ ಸೇವೆಗಳನ್ನು ಕೆಳಹಂತದಲ್ಲಿಯೂ ಬಲಪಡಿಸಲು ಹಾಗೂ ಜನರಿಗೆ ಸ್ಥಳೀಯವಾಗಿ, ಸುಲಭವಾಗಿ ತಜ್ಞರ ಸೇವೆಯನ್ನು ಒದಗಿಸಲು 2022-23ನೇ ಸಾಲಿನಲ್ಲಿ ಘೋಷಿಸಿದಂತೆ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಪ್ರಮುಖವಾಗಿ, ಮನೆ ಮನೆಗೆ ಆರೋಗ್ಯ ಎಂಬ ಕಾರ್ಯಕ್ರಮದಡಿ ದೀರ್ಘಕಾಲಿಕ ಕಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿಗಳನ್ನು ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
Also read: ವಿಐಎಸ್ಎಲ್ ಕಾರ್ಖಾನೆ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಏನು ಹೇಳಿದ್ದಾರೆ? ಇಲ್ಲಿದೆ ನೋಡಿ
ಆರೋಗ್ಯ ಕ್ಷೇತ್ರಕ್ಕೆ ದೊರೆತಿದ್ದು:
- ರಾಜ್ಯದ ನಗರ ಪ್ರದೇಶಗಳಲ್ಲಿ 438 ನಮ್ಮ ಕ್ಲಿನಿಕ್’ಗಳ ಸ್ಥಾಪನೆ
- (272 ನಮ್ಮ ಕ್ಲಿನಿಕ್’ಗಳು ಈಗಾಗಲೇ ಕಾರ್ಯಾರಂಭ
- ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಹೆಚ್ಚಿನ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಕ್ರಮ
- ರಕ್ತಹೀನತೆ ತಡೆಯಲು ಹೊಸ ಯೋಜನೆಗೆ 100 ಕೋಟಿ ರೂ. ಮೀಸಲು
- ಖಾನಾಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೆ
- ರಾಜ್ಯದ ತಾಲೂಕು ಆಸ್ಪತ್ರೆಗಳಲ್ಲಿ ಹೆರಿಗೆಯಾದ ತಾಯಂದಿರು ಮತ್ತು ನವಜಾತ ಶಿಶುಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸಲು 12.05 ಕೋಟಿ ರೂ. ವೆಚ್ಚದಲ್ಲಿ `ನಗು ಮಗು’ ವಾಹನ
- ಕೋಲಾರ, ಬಾಗಲಕೋಟೆ, ಯಾದಗಿರಿ, ಗದಗ, ಚಿಕ್ಕಮಗಳೂರು, ರಾಮನಗರ, ವಿಜಯನಗರ ಮತ್ತು ದೊಡ್ಡಬಳ್ಳಾಪುರ ಆಸ್ಪತ್ರೆಗಳಲ್ಲಿ 50 ಹಾಸಿಗೆ ಸಾಮರ್ಥ್ಯದ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ
- ತುಮಕೂರು ಮತ್ತು ಬೆಂಗಳೂರಿನಲ್ಲಿ 100 ಹಾಸಿಗೆ ಸಾಮರ್ಥ್ಯದ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ
- ತಾಯಂದಿರಿಗೆ ಮತ್ತು ನವಜಾತ ಶಿಶುಗಳಿಗೆ ಉತ್ತಮ ಗುಣಮಟ್ಟದ ಆರೈಕೆಯನ್ನು ನೀಡಲು ಕ್ರಮ
- ರಾಜ್ಯದಲ್ಲಿ 165 ಕೋಟಿ ರೂ. ವೆಚ್ಚದಲ್ಲಿ 10 ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪನೆ
- ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ಹೊಸದಾಗಿ ತಾಯಿ-ಮಕ್ಕಳ ಆಸ್ಪತ್ರೆ ಸ್ಥಾಪನೆ
- ಎಲ್ಲಾ ಜಿಲ್ಲೆಗಳಲ್ಲಿ ಹ್ಯಾಂಡ್ ಹೆಲ್ಡ್ ಎಕ್ಸ್ ರೇ ಯಂತ್ರಗಳ ಮೂಲಕ ಆರಂಭಿಕ ತಪಾಸಣೆ ಮತ್ತು ಚಿಕಿತ್ಸೆಗಾಗಿ 12.50 ಕೋಟಿ ರೂ.
- ಕ್ಯಾನ್ಸರ್ ಪತ್ತೆಗೆ ಅಗತ್ಯವಿರುವ ಸಾಧನಗಳ ಖರೀದಿಗಾಗಿ 12 ಕೋಟಿ ರೂ. ಅನುದಾನ
- 1 ಲಕ್ಷ ಡಯಾಲಿಸಿಸ್ ಸೈಕಲ್’ಗಳಿಗೆ ಹೆಚ್ಚಳ
- 6 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆಗೆ ವಾತ್ಸಲ್ಯ ಯೋಜನೆ
- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಪ್ರಯೋಗಾಲಯಗಳು ಹಾಗೂ ಬೆಂಗಳೂರಿನಲ್ಲಿ ರಾಜ್ಯ ರೆಫರಲ್ ಪ್ರಯೋಗಾಲಯ ಸ್ಥಾಪನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post