ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ #Congress ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಸಂಡೂರಿನಲ್ಲಿ ಅನ್ನಪೂರ್ಣ ಇ ತುಕಾರಾಂ, ಚನ್ನಪಟ್ಟಣದಲ್ಲಿ ಸಿಪಿ. ಯೋಗೇಶ್ವರ್ ಹಾಗೂ ಶಿಗ್ಗಾಂವಿಯಲ್ಲಿ ಯಾಸಿರ್ ಪಠಾಣ್ ಜಯಗಳಿಸಿದ್ದಾರೆ.
ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತದಾರರು ಬೆಂಬಲ ವ್ಯಕ್ತಪಡಿಸಿರುವುದಕ್ಕೆ ಕಾಂಗ್ರೆಸ್ ಸಂತಸ ವ್ಯಕ್ತಪಡಿಸಿದೆ. ಹಾಗೂ ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು ಎಂದು ಅಭಿಪ್ರಾಯಪಟ್ಟಿದೆ.
Also read: ಪ್ರಕೃತಿ, ಪರಿಸರ ಸಂರಕ್ಷಣೆಯೊಂದಿಗೆ ಅಭಿವೃದ್ಧಿಯೇ ಸುಸ್ಥಿರತೆ: ಸಚಿವ ಈಶ್ವರ ಖಂಡ್ರೆ
ಭಾರೀ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ಕ್ಷೇತ್ರ ಕಾಂಗ್ರೆಸ್ ಪಾಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಗೆಲುವಿನ ನಗೆ ಬೀರಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು ಮತದಾರರು ಯೋಗೇಶ್ವರ್ ಕೈಹಿಡಿದಿದ್ದಾರೆ.
ಮೊದಲ 6 ಸುತ್ತಿನಲ್ಲಿ ನಿಖಿಲ್ ಮುನ್ನಡೆಯಲ್ಲಿದ್ದರು. ಆದರೆ, ಇವಿಎಂ ಓಪನ್ ಆಗುತ್ತಿದ್ದಂತೆ ಯೋಗೇಶ್ವರ್ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.
ಇನ್ನು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೋಲಾಗಿದ್ದು, ಈ ಮೂಲಕ ನಿಖಿಲ್ ಕುಮಾರಸ್ವಾಮಿ ಅವರಿಗೆ ಇದು ಮೂರನೇ ಸೋಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post