ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಉಪಚುನಾವಣೆ #By Election ಫಲಿತಾಂಶದಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ಸೋಲಿಗೆ ಕಾರಣ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ #R Ashok ಅವರು ಹೇಳಿದ್ದಾರೆ.
ಮೂರು ಕ್ಷೇತ್ರಗಳಲ್ಲಿ ಸೋಲು ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನಾವು ಒಂದು ವರ್ಷ, ಆರು ತಿಂಗಳಿಂದಲೇ ಅಭ್ಯರ್ಥಿ ತಯಾರು ಮಾಡಿ ಬಿಟ್ಟಿದ್ದರೆ ಮೂರು ಕ್ಷೇತ್ರಗಳಲ್ಲಿ ಒಳ್ಳೆಯ ಫಲಿತಾಂಶ ಬರುತ್ತಿತ್ತು. ಕೊನೆಯ ಹಂತದಲ್ಲಿ ಚುನಾವಣೆ ಘೋಷಣೆ ಆದ ಮೇಲೆ ಅಭ್ಯರ್ಥಿ ತಯಾರು ಮಾಡಿದ್ದು ಕೂಡಾ ಹಿನ್ನೆಡೆ ಆಗಿದೆ ಎಂದು ಹೇಳಿದರು.
Also read: ಉಪಚುನಾವಣೆ | ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ
ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕೊನೆಯವರೆಗೂ ನಾವು ಅಭ್ಯರ್ಥಿ ಘೋಷಿಸಿರಲಿಲ್ಲ. ಬೇಗ ಅಭ್ಯರ್ಥಿ ಘೋಷಣೆ ಮಾಡಿದ್ದು ಕಾಂಗ್ರೆಸ್‌ಗೆ ಪ್ಲಸ್ ಪಾಯಿಂಟ್ ಆಗಿದೆ. ರಾಜೀನಾಮೆ ಕೊಟ್ಟ ಕೂಡಲೇ ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ್ದರೆ ಗೆಲುವು ಆಗುತ್ತಿತ್ತು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post