ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮೂರು ಕ್ಷೇತ್ರಗಳಿಗೆ ಉಪಚುನಾವಣೆ #By-Election ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು #Basavaraja Bommai ಇಂದು ಮಾಜಿ ಸಿಎಂ ಹಾಗೂ ಬಿಜೆಪಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ #B S Yadiyurappa ಅವರನ್ನು ಬೆಂಗಳೂರಿನ ಬಿಎಸ್ ವೈ ಅವರ ಧವಳಗಿರಿ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿದರು.
ಬಿ.ಎಸ್. ಯಡಿಯೂರಪ್ಪ ಅವರ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಸಹಜವಾಗಿ ಭೇಟಿ ಮಾಡುತ್ತೇವೆ. ಚುನಾವಣೆಯ ಬಗ್ಗೆ ಬಂದು ಮಾತನಾಡು ಅಂದರು, ಅವರೊಂದಿಗೆ ಮಾತಾಡಿದ್ದೇನೆ. ಶಿಗ್ಗಾವಿ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಯಿತು. ಚುನಾವಣೆಗೆ ಏನೇನು ತಯಾರಿ ಮಾಡಿದ್ದೇವೆ ಅಂತ ಕೇಳಿದರು, ಎಲ್ಲ ಸಿದ್ದತೆ ಮಾಡಿಕೊಂಡಿರುವ ಬಗ್ಗೆ ಹೇಳಿದ್ದೇನೆ. ಅಭ್ಯರ್ಥಿ ಆಯ್ಕೆ ಬಗ್ಗೆಯೂ ಚರ್ಚೆ ಆಗಿದೆ. ಅಂತಿಮವಾಗಿ ಯಾರಿಗೇ ಟಿಕೆಟ್ ಕೊಟ್ಟರೂ ಗೆಲ್ಲಿಸಬೇಕು ಅಂತ ಆಗಿದೆ. ದೆಹಲಿಗೆ ಅಕ್ಟೋಬರ್ 19ರ ನಂತರ ಹೋಗುತ್ತೇನೆ. ಎಲ್ಲ ಮೂರು ಕ್ಷೇತ್ರಗಳಲ್ಲೂ ಗೆಲ್ಲುದಕ್ಕೆ ಪ್ರಯತ್ನ ಮಾಡೋಣ ಅಂದಿದ್ದಾರೆ ಎಂದು ಹೇಳಿದರು.
Also read: ಜಗಳೂರು ಇನ್ಮುಂದೆ ಬರದನಾಡಲ್ಲ, ಬಂಗಾರದ ನಾಡು: ತರಳಬಾಳು ಶ್ರೀ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post