ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕೆ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ತಿಳಿಸಿದರು.
ಅವರು ಇಂದು ವಿಧಾನಸಭೆಯಲ್ಲಿ ಆಯವ್ಯಯ ಭಾಷಣ ಕುರಿತ ಚರ್ಚೆಗೆ ಉತ್ತರ ನೀಡಿದರು. ಬಸವರಾಜ ಬೊಮ್ಮಾಯಿ ಅವರು 2023 ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ. ನಾನು ಜುಲೈ 2023 ರಲ್ಲಿ ಮಂಡಿಸಿದ ಬಜೆಟ್‌ಗಿಂತ ಇದು 43,601 ಕೋಟಿ ರೂ. ಹೆಚ್ಚಳವಾಗಿದೆ.
Also read: ಪಿಓಪಿ ಮೂರ್ತಿ ತಯಾರಕರು, ಪಟಾಕಿ ಮಾರಾಟಗಾರರಿಗೆ ನೋಟಿಸ್: ಕಾರಣವೇನು?
ಅಂತೆಯೇ ರಾಜ್ಯದ ಜಿಡಿಪಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂರೆ 2,41,723 ಕೋಟಿ ರೂ. ಹೆಚ್ಚು. ಅಭಿವೃದ್ಧಿ ಇಲ್ಲದೆ ಆಯವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post