No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸರಸ್ವತಿ ಸಮ್ಮಾನ್ ಪಡೆದ ಸರಸ್ವತಿ ಪುತ್ರ ಸುಳ್ಳು ಹೇಳಬಹುದೇ?: ವೀರಪ್ಪಮೊಯ್ಲಿಗೆ ಕುಟುಕಿದ ಮಾಜಿ ಸಿಎಂ ಎಚ್’ಡಿಕೆ

ಕಾವೇರಿ ವಿಷಯದಲ್ಲಿ ಧರ್ಮಸಿಂಗ್, ಸಿದ್ದರಾಮಯ್ಯ ಅವರನ್ನು ದಾರಿ ತಪ್ಪಿಸಿದ್ದು ಸಾಲದೆ? | 1962ರಿಂದ ದೇವೇಗೌಡರು ನಡೆಸಿದ ಹೋರಾಟ ನೆನಪಿಸಿದ ಎಚ್'ಡಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 14, 2023
in ಬೆಂಗಳೂರು ನಗರ, ರಾಜಕೀಯ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ರಾಜ್ಯ ನೀರಾವರಿಗೆ ಮಣ್ಣಿನ ಮಕ್ಕಳಿಂದ ಅನ್ಯಾಯವಾಗಿದೆ ಎಂದು ಹೇಳಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ HDKumaraswamy ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗೆ ಅವರು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿ, ನೆಲಮಂಗಲದಲ್ಲಿ ನಡೆದ ಸಭೆಯೊಂದರಲ್ಲಿ ಭಾಷಣ ಮಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ Veerappa Moily ತಪ್ಪು ಹೇಳಿಕೆ ನೀಡಿದ್ದಾರೆ. ಹಸಿ ಸುಳ್ಳುಗಳನ್ನು ಹೇಳಿದ್ದಾರೆ. ಮಣ್ಣಿನ ಮಕ್ಕಳಿಂದ‌ ಕಾವೇರಿಗೆ ದ್ರೋಹ ಆಗಿದೆ ಅಂತ ಹೇಳಿದ್ದಾರೆ. ಆದರೆ, ತಮ್ಮಿಂದ ಏನು ಆಗಿದೆ ಎನ್ನುವುದನ್ನು ಹೇಳಬೇಕಿತ್ತು. ಆದರೆ, ಬರೀ ಅಸತ್ಯವನ್ನೇ ಹೇಳಿ ಜನರ ಹಾದಿ ತಪ್ಪಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು.
ಇವರಿಂದ ನೀರಾವರಿಗೆ ನ್ಯಾಯ ಸಿಕ್ಕಿದ್ದು ಏನೂ ಇಲ್ಲ. ಆಗಿರುವುದಿಲ್ಲ ಅನ್ಯಾಯವೇ. ಹಿಂದೆ ಮುಖ್ಯ ಮಂತ್ರಿಯಾಗಿದ್ದ ಧರ್ಮಸಿಂಗ್, ಉಪ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರನ್ನು ಕಾವೇರಿ ವಿಷಯದಲ್ಲಿ ದಾರಿ ತಪ್ಪಿಸಿದ್ದು ಇದೇ ವೀರಪ್ಪ ಮೊಯಿಲಿ ಎಂದು ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು.

ಪಿಯರ್ ಲೆಸ್ ನಿಂದ ಸಾಲ ತಂದು ಸಂಬಳ ಕೊಟ್ಟರು:
ಈ ಮಹಾನುಭಾವರು ಎರಡು ವರ್ಷ ಮುಖ್ಯಮಂತ್ರಿ ಆಗಿದ್ದರು. ಈ ವ್ಯಕ್ತಿ ಅಧಿಕಾರ ಕಳೆದುಕೊಂಡು ಮನೆಗೆ ಹೋಗುವಾಗ ಬೊಕ್ಕಸವನ್ನು ದಿವಾಳಿ ಮಾಡಿದ್ದರು. ಸರಕಾರಿ ನೌಕರರಿಗೆ ಸಂಬಳ ಕೊಡಲಿಕ್ಕೆ ಹಣ ಇರಲಿಲ್ಲ. ಆಗ ಪಶ್ಚಿಮ ಬಂಗಾಳದ ಪಿಯರ್‌ಲೆಸ್‌ ಸಂಸ್ಥೆಗೆ ರಾಜ್ಯವನ್ನು ಒತ್ತೆ ಇಟ್ಟು ಸಾಲ ತಂದವರು ಇವರು. ಇಂಥವರು ಮಣ್ಣಿನಮಕ್ಕಳಿಂದ ನೀರಾವರಿಗೆ ಅನ್ಯಾಯ ಆಗಿದೆ ಎಂದು ಸುಳ್ಳು ಹೇಳಿದ್ದಾರೆ ಎಂದು ಅವರು ಕಿಡಿ ಕಾರಿದರು.
ಸರಸ್ವತಿ ಪುತ್ರರ ಬಾಯಲ್ಲಿ ಸುಳ್ಳು ಬರಬಹುದೇ?:
“ಓಹೋ.. ಇವರು ಕವಿ ಸರ್ವೋತ್ತೋಮರು, ಮಹಾಕವಿಗಳು. ನಮ್ಮ ಕುವೆಂಪು ಅವರಿಗಿಂತ ಮಹಾನ್ ಕವಿಗಳು.. ರಾಮಾಯಣವನ್ನು ಮಹಾನ್ವೇಷಣೆ ಮಾಡಿ ಮಹಾಕಾವ್ಯ ಬರೆದ ಮಹಾನುಭಾವರು. ಸರಸ್ವತಿ ಸಮ್ಮಾನ ಪುರಸ್ಕಾರ ಪಡೆದ ಸರಸ್ವತಿ ಪುತ್ರರು. ಇಂಥ ಸರಸ್ವತಿ ಪುತ್ರರ ಬಾಯಲ್ಲಿ ಸುಳ್ಳು ಬರಬಹುದೇ? ಎಂದು ಕುಮಾರಸ್ವಾಮಿಅವರು ವೀರಪ್ಪ ಮೊಯಿಲಿ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಕಾವೇರಿ ಟ್ರಿಬ್ಯೂನಲ್ ರಚಿಸುವಾಗ ಏನು ಮಾಡಿದ್ದೀರಿ?:
ಕಾವೇರಿ ಟ್ರಿಬ್ಯುನಲ್ ರಚಿಸುವಾಗ ಈ ಮಹಾನುಭಾವನ ಕೊಡುಗೆ ಏನು? ಅದರ ರಚನೆ ವಿರುದ್ಧ ದೇವೇಗೌಡರು ಹೋರಾಟ ನಡೆಸುತ್ತಿದ್ದಾಗ ಇವರ ಪಾತ್ರ ಏನಾಗಿತ್ತು? 1962ರಿಂದ ಕಾವೇರಿ ನೀರಿನ ಹಕ್ಕಿಗಾಗಿ ಜೀವನ ಮೀಸಲಿಟ್ಟ ಆ ಮಣ್ಣಿನಮಗನ ಹೋರಾಟದ ಫಲ ಏನೆಂಬುದು ಇವರಿಗೆ ಗೊತ್ತಿಲ್ಲವೇ? ಹಾರಂಗಿ, ಹೇಮಾವತಿ, ಕಬಿನಿ ಜಲಾಶಯಗಳು ಹೇಗೆ ನಿರ್ಮಾಣ ಆದವು? ಇವರ ಸಾಧನೆ ಏನು? ಎಂದು ಮಾಜಿ ಮುಖ್ಯಮಂತ್ರಿ ಅವರು ಖಾರವಾಗಿ ಪ್ರಶ್ನಿಸಿದರು.
ರಾಜ್ಯದ ನೀರಾವರಿಗೆ ಇಷ್ಟೆಲ್ಲಾ ಕೊಡುಗೆ ನೀಡಿದ ದೇವೆಗೌಡರನ್ನು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದರಲ್ಲ..? ಹಾಗಾದರೆ, ಇವರ ಕೊಡುಗೆ ಏನು ಎಂಬ ಬಗ್ಗೆ ಸತ್ಯ ಹೇಳಬೇಕೇ ವಿನಾ ಸುಳ್ಳು ಹೇಳಬಾರದಲ್ಲವೇ ಇವರಿಂದ ನಾವು ಪಾಠ ಹೇಳಿಸಿಕೊಳ್ಳಬೇಕಾ? ಪಾಪ.. ಇವರನ್ನು ಕರೆಸಿ ಕೂರಿಸಿಕೊಂಡು ಸರಕಾರ ಸಲಹೆ ಪಡೆದುಕೊಳ್ಳಲಿ. ನಮಗಿಂತ ಅವರೇ ಒಳ್ಳೆಯ ಸಲಹೆ ಕೊಡುತ್ತಾರೆ.

Also read: ಸತ್ಯಧರ್ಮ ತೀರ್ಥರ ತಪಸ್ಸು, ಸಾಧನೆಗೆ ದೇವರು ಒಲಿದ ರೀತಿಯೇ ಅದ್ಬುತ: ಸತ್ಯಾತ್ಮತೀರ್ಥರ ಅಭಿಮತ

ನಮ್ಮನ್ನು ಕರೆದರೆ ಉಪಯೋಗ ಏನು?
ರಾಜ್ಯದ ನೀರಾವರಿ ಅನ್ಯಾಯದ ಅಧ್ಯಾಯಗಳನ್ನು ಒಮ್ಮೆ ತಿರುವಿ ಹಾಕಿದರು ಇವರು ಎಸಗಿದ ಅನ್ಯಾಯಗಳೇನು ಎನ್ನುವುದು ಗೊತ್ತಾಗುತ್ತದೆ. ಯಾವ ಯಾವ ಸಂದರ್ಭದಲ್ಲಿ ಆ ಮಹಾನುಭಾವರಿಂದ ಏನೇನಾಯ್ತು ಎನ್ನುವುದು ತಿಳಿಯುತ್ತದೆ. ಧರಂಸಿಂಗ್‌ ಅವರನ್ನೇ ದಾರಿ ತಪ್ಪಿಸಿದ್ದ ಈ ವ್ಯಕ್ತಿಯಿಂದಲೇ ಸರಕಾರ ಸಲಹೆ ಸ್ವೀಕರಿಸಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರಕಾರಕ್ಕೆ ನಾಡಿನ ಜನರ ಹಿತರಕ್ಷಣೆಯ ತಿಳಿವಳಿಕೆಯೂ ಇಲ್ಲ, ಕಾಳಜಿಯೂ ಇಲ್ಲ. ಜನರ ಹಿತರಕ್ಷಣೆ ಮಾಡುವ ತಾಕತ್ತು ಇಲ್ಲ, ದಮ್ಮು ಎರಡೂ ಇಲ್ಲ. ಹೀಗಾದರೆ, ರೈತರ ಬೆಳೆಗಳಿಗೆ, ಬೆಂಗಳೂರಿಗೆ ಕುಡಿಯುವ ಎಲ್ಲಿಂದ ತಂದು ಕೊಡುತ್ತಾರೆ? ಎಂದು ಅವರು ಪ್ರಶ್ನಿಸಿದರು.
ತಮಿಳುನಾಡಿನ ನೀರು ಬಳಕೆ ಬಗ್ಗೆ ಸರಕಾರಕ್ಕೆ ಮಾಹಿತಿ ಇದೆಯಾ?:
ತಮಿಳುನಾಡಿನಲ್ಲಿ ಎಷ್ಟು ಎಕರೆ ಬೆಳೆ ಬೆಳೆದಿದ್ದಾರೆ. ಎಷ್ಟು ನೀರಾವರಿ ಭೂಮಿಯನ್ನು ವಿಸ್ತರಣೆ ಮಾಡಿಕೊಂಡಿದ್ದಾರೆ. ಈವರೆಗೆ ಎಷ್ಟು ನೀರು ನೀಡಲಾಗಿದೆ. ಈ ಎಲ್ಲಾ ಮಾಹಿತಿ ರಾಜ್ಯ ಸರಕಾರಕ್ಕೆ ಇದೆಯಾ? ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಜಲ ನಿಯಂತ್ರಣ ಸಮಿತಿಗೆ ಇವರು ಮಾಹಿತಿ ಕೊಟ್ಟಿದ್ದಾರೆಯೇ ಎಂದು ಅವರು ಕೇಳಿದರು.

ಹಿಂದೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವಾಗಲೇ ನಾವು ಉಗ್ರವಾಗಿ ಪ್ರತಿಭಟಿಸಿದ್ದೆವು. ಆದರೆ, ಕಾಂಗ್ರೆಸ್ ಸರಕಾರಗಳು ಮಾಡಿದ್ದೇನು? ನಿರಂತರವಾಗಿ ರಾಜ್ಯದ ಹಿತ ಕಡೆಗಣಿಸಿದವು. ಈಗ ನೋಡಿದರೆ ಸಂಕಷ್ಟ‌ದ ಸೂತ್ರದ ಬಗ್ಗೆಯೇ ಚಕಾರ ಎತ್ತದೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಪದೇಪದೆ ಕರ್ನಾಟಕದ ಮೇಲೆ ದಬ್ಬಾಳಿಕೆ ಮಾಡುವ ಕೆಲಸ ಆಗುತ್ತಿದೆ ಎಂದು ಅವರು ಕಿಡಿಕಾರಿದರು.
ಸಭೆಗೆ ಹೋಗಲಾಗುತ್ತಿಲ್ಲ:
ಕಾವೇರಿ ವಿಚಾರವಾಗಿ ತುರ್ತಾಗಿ ಸರ್ವಪಕ್ಷ ಸಭೆಯನ್ನು ಮುಖ್ಯಮಂತ್ರಿಗಳು ಕರೆದಿದ್ದಾರೆ. ಆದರೆ ನನಗೆ ಪೂರ್ವನಿಗದಿತ ಕಾರ್ಯಕ್ರಮ ಇರುವುದರಿಂದ ಭಾಗಿಯಾಗಲು ಸಾಧ್ಯ ಆಗುತ್ತಿಲ್ಲ. ಹದಿನೈದು ದಿನಗಳ ಹಿಂದೆಯೇ ಹಾಸನ ಕಾರ್ಯಕ್ರಮ‌ ನಿಗದಿ ಆಗಿತ್ತು. ಹೀಗಾಗಿ ನಾನು ಸರ್ವಪಕ್ಷ ಸಭೆಗೆ ಭಾಗಿಯಾಗಲು ಆಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share197Tweet123Send
Previous Post

ಸತ್ಯಧರ್ಮ ತೀರ್ಥರ ತಪಸ್ಸು, ಸಾಧನೆಗೆ ದೇವರು ಒಲಿದ ರೀತಿಯೇ ಅದ್ಬುತ: ಸತ್ಯಾತ್ಮತೀರ್ಥರ ಅಭಿಮತ

Next Post

ಗಮನಿಸಿ! ಸೆ.15ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.15ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL