ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಜಾರಿ ಮಾಡಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ ಮುಖ್ಯಮಂತ್ರಿಗಳು ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದ್ದು, ನಾಳೆಯಿಂದಲೇ ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂವನ್ನು ರದ್ದುಮಾಡಲಾಗಿದೆ ಎನ್ನಲಾಗಿದೆ.
ಕೊರೋನಾ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು. ಆದರೆ, ವೀಕೆಂಡ್ ಕರ್ಫ್ಯೂಗೆ ಸಾರ್ವಜನಿಕರು, ವ್ಯಾಪಾರಸ್ಥರು ಮಾತ್ರವಲ್ಲ ಸರ್ಕಾರದ ಸಚಿವರು ಹಾಗೂ ಶಾಸಕರುಗಳಿಂದಲೇ ವಿರೋಧ ವ್ಯಕ್ತವಾಗಿತ್ತು. ಕಳೆದ ಅಲೆಗೆ ಹೋಲಿಕೆ ಮಾಡಿದರೆ ಈ ಬಾರಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಿದೆ.
ವೀಕೆಂಡ್ ಕರ್ಫ್ಯೂನಿಂದ ಜನ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಹೀಗಾಗಿ, ಇದನ್ನು ರದ್ದು ಮಾಡುವಂತೆ ಒತ್ತಡ ಹೇರಲಾಗಿತ್ತು. ಈ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಸುತ್ತಿರುವ ಮುಖ್ಯಮಂತ್ರಿಗಳು ವೀಕೆಂಡ್ ಕರ್ಫ್ಯೂ ಮುಂದುವರೆಸುವ ಬಗ್ಗೆ ಪರ ವಿರೋಧ ಮಾಹಿತಿ ಪಡೆಯುತ್ತಿದ್ದಾರೆ. ಆದರೆ, ಯಾವುದೇ ರೀತಿಯ ಅಂತಿಮ ನಿರ್ಧಾರಕ್ಕೆ ಇನ್ನೂ ಬರಬೇಕಿದ್ದು, ಊಹಾಪೋಹಗಳು ಹರಿದಾಡುತ್ತಿವೆ.
ಒಂದು ಮೂಲದ ಪ್ರಕಾರ ಇನ್ನೊಂದು ವಾರ ಕರ್ಫ್ಯೂ ಮುಂದುವರೆಸುವಂತೆ ತಜ್ಞರು ಸಲಹೆ ಮಾಡಿದ್ದು, ಇದಕ್ಕೆ ಕೆಲವು ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಮುಖ್ಯಮಂತ್ರಿಗಳು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post