ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ವರದಿ: ಡಿ.ಎಲ್. ಹರೀಶ್
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ತಿಳಿಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಎಂ ಬಿ ಪಾಟೀಲ್, ಚೆಲುವರಾಯಸ್ವಾಮಿ ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್ ಕೆ ಅತೀಕ್, ವಾಣಿಜ್ಯ ಮತ್ರು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post