ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಖ್ಯಾತ ಕನ್ನಡತಿ #Kannadathi ಸೀರಿಯಲ್ ನಟ ಹಾಗು ರಾನಿ ಚಿತ್ರದ ನಾಯಕ ಕಿರಣ್ ರಾಜ್ #Kiran Raj ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.
ಮುದ್ದರಾಯನ ಪಾಳ್ಯ ವೃದ್ದಾಶ್ರಮಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ್ ಕಾರು ಚಾಲನೆ ಮಾಡುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ.
Also read: ಶಾಕಿಂಗ್! ಕ್ಲಾಸ್’ನಲ್ಲಿ ಪಾಠ ಕೇಳುವಾಗಲೇ ಲೋ ಬಿಪಿಯಿಂದ ಪ್ರಾಣಬಿಟ್ಟ 8ನೇ ತರಗತಿ ವಿದ್ಯಾರ್ಥಿ
ಗುದ್ದಿದ ರಭಸಕ್ಕೆ ಕಿರಣ್ ರಾಜ್ ಗೆ ಎದೆಯ ಭಾಗಕ್ಕೆ ಪೆಟ್ಟಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಕಿರಣ್ ರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕಿರುತೆರೆಯಲ್ಲಿ ಕನ್ನಡತಿ ಧಾರಾವಾಹಿ ಮೂಲಕ ಖ್ಯಾತಿ ಪಡೆದಿದ್ದ ಕಿರಣ್ ರಾಜ್ ಅಭಿನಯದ ರಾನಿ ಸಿನಿಮಾ ಬಿಡುಗಡೆಗೆ ಒಂದು ದಿನ ಇರುವಾಗ ಅಪಘಾತ ಸಂಭವಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post