ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಅತೀ ವೇಗದಿಂದ ಬಂದ ಇನ್ನೋವಾ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕೆಆರ್ ಪುರಂನಲ್ಲಿ ನಡೆದಿದೆ.
ಆಟೋದಲ್ಲಿ ಚಾಲಕ ಖಾಲಿದ್, ಪತ್ನಿ ತಾಸೀನಾ, ಸಹೋದರಿ ಫಾಝಿಲಾ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. ಕೆಆರ್ ಪುರಂನಿಂದ ಚನ್ನಸಂದ್ರಕ್ಕೆ ಕುಟುಂಬ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ತಾಸೀನಾ, ಫಾಝಿಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post