ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಒಡೆತನದ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ದಾಳಿ ನಡೆಸಿದ್ದು, ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಹಿ ಸಿರುವ ಡಿ.ಕೆ. ಶಿವಕುಮಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ಪ್ರಕರಣಗಳು ನಡೆಯುತ್ತಿದ್ದು, ಎಲ್ಲಾ ಕಡೆಯಿಂದ ನನಗೆ ತೊಂದರೆ ಕೊಡುತ್ತಿದ್ದಾರೆ. ಇಂದು ದಾಳಿ ವೇಳೆಯಲ್ಲಿ ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬಂಧಪಟ್ಟಂತೆ ನೋಟಿಸ್ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಸುತ್ತು ಹಾಕಿ ತಹಶಿಲ್ದಾರ್ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರು.
ಡಿಕೆ ಶಿವಕುಮಾರ್ ಅವರು ನ್ಯಾಷನಲ್ ಎಜುಕೇಶನ್ ಫೌಂಡೇಶನ್ ಸಂಸ್ಥೆಯ ಚೇರ್ಮನ್ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯದರ್ಶಿಯಾಗಿದ್ದಾರೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ.
Also read: ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post