ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಸರಕಾರದ ಗೃಹ ಸಚಿವರ ಮನವಿಯಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯಕ್ಕೆ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯದ ಸ್ಥಾಪನೆಗೆ, ಹಸಿರು ನಿಶಾನೆ ನೀಡಿದ್ದು, ಈ ಸಂಬಂಧ, ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ, ಸಭೆ ನಡೆಸಿ ಚರ್ಚಿಸಿದರು.
ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಒಳಾಡಳಿತ ಇಲಾಖೆ) ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಿತೇಂದ್ರ, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಲತಾ, ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಾಗರಾಜ್ ಉಪಸ್ಥಿತರಿದ್ದರು.
ಪ್ರಸ್ತಾವಿತ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸೂಕ್ತವಾದ ಜಮೀನು ಅಗತ್ಯವಿದ್ದು, ಅದರ ಲಭ್ಯತೆ ಹಾಗೂ ಇನ್ನಿತರ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post