No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ: ಡಿಸಿಎಂ ಅಶ್ವತ್ಥನಾರಾಯಣ

ಜೂನ್ 15ರಿಂದ ನೋಂದಣಿ: ಆಗಸ್ಟ್ 28-29ಕ್ಕೆ ಸಿಇಟಿ

kalpa News by kalpa News
June 8, 2021
in ಬೆಂಗಳೂರು ನಗರ
0
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ: ಡಿಸಿಎಂ ಅಶ್ವತ್ಥನಾರಾಯಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: 2020-21ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನು ರದ್ದು ಮಾಡಿರುವುದರಿಂದ ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೊರ್ಸುಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಅಂಕಗಳನ್ನು ಮಾತ್ರ ಪರಿಗಣನೆ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.

ಈ ಸಂಬಂಧ ಬೆಂಗಳೂರಿನಲ್ಲಿ ಮಂಗಳವಾರ ಉನ್ನತ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿ, ನೀಟ್ ಸೇರಿ ರಾಜ್ಯದಲ್ಲಿ ನಡೆಯುವ ಎಲ್ಲ ವೃತ್ತಿಪರ ಕೋರ್ಸುಗಳಿಗೆ ಪಿಯುಸಿ ಅಂಕವನ್ನು ಪರಿಗಣನೆ ಮಾಡದಿರಲು ನಿರ್ಧರಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಸುರೇಶ್‌ ಕುಮಾರ್‌ ಅವರು ಈ ನಿಟ್ಟಿನಲ್ಲಿ ನೀಡಿದ್ದ ಸಲಹೆಯನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಘೋಷಣೆ ಮಾಡಿರುವಂತೆ ಅಗಸ್ಟ್‌ 28, 29 ಹಾಗೂ 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ದ್ವಿತೀಯ ಪಿಯುಸಿ (ವಿಜ್ಞಾನ) ಪಾಸಾದ ಪ್ರತೀ ವಿದ್ಯಾರ್ಥಿಯೂ ಸಿಇಟಿ ಬರೆಯಲು ಅವಕಾಶವಿದೆ ಎಂದು ಅವರು ತಿಳಿಸಿದರು.

ಎಲ್ಲ ಐಚ್ಛಿಕ ವಿಷಯಗಳ ಪರೀಕ್ಷೆ 28 ಮತ್ತು 29ರಂದು ನಡೆಯುತ್ತದೆ. ಉಳಿದಂತೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಅಗಸ್ಟ್ 30ರಂದು ಪರೀಕ್ಷೆ ನಡೆಯಲಿದೆ. ಮೊದಲು ಯಾವ ಪದ್ಧತಿಯಲ್ಲಿ ಪರೀಕ್ಷೆ ನಡೆಯುತ್ತಿತ್ತೋ ಅದೇ ರೀತಿ ಪರೀಕ್ಷೆ ನಡೆಯುತ್ತದೆ. ಪ್ರತಿ ವಿಷಯಕ್ಕೆ 60 ಅಂಕ ಇರುತ್ತದೆ. ಮೊದಲ ದಿನ ಗಣಿತ & ಜೀವವಿಜ್ಞಾನ ಹಾಗೂ ಎರಡನೇ ದಿನ ಭೌತವಿಜ್ಞಾನ & ರಸಾಯನಿಕ ವಿಜ್ಞಾನ ಇರುತ್ತದೆ ಎಂದರು.

ಅಂಕಗಳ ಮಿತಿ ಇಲ್ಲ, ವಿನಾಯಿತಿಯ ವಿವರ:
ಸಿಇಟಿಯಲ್ಲಿ ಎಂಜಿನಿಯರಿಂಗ್, ಪಶುವೈದ್ಯ, ಕೃಷಿ ವಿಜ್ಞಾನ, ಆರ್ಕಿಟೆಕ್ಟ್, ಫಾರ್ಮಸಿ ಪ್ರವೇಶ ಪರೀಕ್ಷೆಗೆ ಇದ್ದ ʼಅರ್ಹ ಅಂಕʼಗಳ ಷರತ್ತನ್ನು ತೆಗೆದು ಹಾಕಲಾಗಿದೆ. ಕೇವಲ ಸಿಇಟಿ ಅಂಕಗಳ ಆಧಾರದ ಮೇಲೆ ಮಾತ್ರ ರಾಂಕ್ ಕೊಡಲಾಗುವುದು. ವೃತ್ತಿಪರ ಎಂಜಿನಿಯರಿಂಗ್ ಕೋರ್ಸ್ʼಗೆ ಭೌತಶಾಸ್ತ್ರ, ರಸಾಯನಶಾಸ್ತ್ರ & ಗಣಿತ ವಿಷಯಗಳಲ್ಲಿ ಸಿಇಟಿ ಬರೆಯಲು ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ ಶೇ.45 ಹಾಗೂ ಪರಿಶಿಷ್ಟ ಜಾತಿ-ವರ್ಗದ ಅಭ್ಯರ್ಥಿಗಳು ಶೇ.40ರಷ್ಟು ಅಂಕಗಳನ್ನು ಗಳಿಸಬೇಕೆಂಬ ಷರತ್ತು ಇತ್ತು. ಆದರೆ ಈಗ ಬದಲಿಸಿದ್ದು, ಪಿಸಿಎಂ ಹಾಗೂ ನಿಗದಿತ ಐಚ್ಛಿಕ ವಿಷಯಗಳಲ್ಲಿ ಉತ್ತೀರ್ಣರಾಗಿರುವ ಎಲ್ಲ, ಅಂದರೆ ಜಸ್ಟ್ ಪಾಸ್ ಆಗಿರುವ ವಿದ್ಯಾರ್ಥಿಗಳು ಕೂಡ ಸಿಇಟಿ ಬರೆಯಲು ಅರ್ಹತೆ ಹೊಂದಿರುತ್ತಾರೆ. ಅಂಕಗಳ ಮಿತಿ ಸಡಿಲಿಕೆ ಮಾಡಿರುವ ಬಗ್ಗೆ ಎಲ್ಲ ಸಂಬಂಧಿತ ಪರೀಕ್ಷಾ ಮಂಡಳಿಗಳು, ಇನ್ನಿತರೆ ಸಂಬಂಧಿತ ಎಲ್ಲ ಸಂಸ್ಥೆಗಳಿಗೆ ಸರಕಾರ ಪತ್ರ ಬರೆಯಲಿದೆ ಎಂದು ಡಿಸಿಎಂ ಇದೇ ವೇಳೆ ತಿಳಿಸಿದರು.

2021-22ನೇ ವರ್ಷಕ್ಕೆ ಮಾತ್ರ:
ಎಂಜಿನಿಯರಿಂಗ್ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ರಾಂಕ್ ನಿರ್ಧರಿಸಲು ಪ್ರಸ್ತುತ ನಿಯಮದಲ್ಲಿ ಇರುವಂತೆ ಅರ್ಹತಾ ಪರೀಕ್ಷೆ ಮತ್ತು ಸಿಇಟಿ ಪರೀಕ್ಷೆಯಲ್ಲಿ ಪಡೆದ ಪಿಸಿಎಂ ವಿಷಯಗಳ ಅಂಕಗಳನ್ನು ಸಮನಾಗಿ ಪರಿಗಣಿಸಿ ಸಿಇಟಿ ರಾಂಕ್ ನೀಡಲಾಗುತ್ತಿತ್ತು. ಅದರ ಬದಲಿಗೆ ಈಗ ಕೇವಲ ಸಿಇಟಿ ಪರೀಕ್ಷೆಯಲ್ಲಿನ ಪಿಸಿಎಂ ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳನ್ನು ಮಾತ್ರ ಪರಿಗಣಿಸಿ ಎಂಜಿನಿಯರಿಂಗ್ ರಾಂಕ್ ಕೊಡಲಾಗುವುದು. ಈ ಬದಲಾವಣೆ 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

ಜೂನ್ 15ರಿಂದ ನೋಂದಣಿ:
ಸಿಇಟಿ ಬರೆಯಲಿಚ್ಛಿಸುವ ವಿದ್ಯಾರ್ಥಿಗಳು ಜೂನ್ 15ರಿಂದಲೇ ಆನ್ ಲೈನ್ ಮೂಲಕ ರಿಜಿಸ್ಟ್ರೇಷನ್ ಮಾಡಿಕೊಳ್ಳಬೇಕು ಎಂದು ಅವರು ಮಾಹಿತಿ ನೀಡಿದರು.

ಸಿಇಟಿಗೂ ನೀಟ್ ನಂತೆ ಅಂಕ ಮಿತಿ?:
ಇದೇ ವೇಳೆ ನೀಟ್ ನಲ್ಲಿ ಇಂತಿಷ್ಟು ಅಂಕ ಗಳಿಸಿದರೆ ಮಾತ್ರ ವೈದ್ಯ ಕೋರ್ಸುಗಳಿಗೆ ಪ್ರವೇಶ ಇದೆ. ಅದೇ ಪದ್ಧತಿಯನ್ನು ಸಿಇಟಿಯಲ್ಲೂ ತರುವ ಉದ್ದೇಶವಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಗುಣಮಟ್ಟದ ದೃಷ್ಟಿಯಲ್ಲಿ ಸರಕಾರ ಈ ನಿಟ್ಟಿನಲ್ಲಿ ಚಿಂತಿಸುತ್ತಿದೆ. ಪಾಸಾದವರೆಲ್ಲ ಎಂಜಿನಿಯರಿಂಗ್ ಸೇರುತ್ತಿದ್ದಾರೆ. ಆದ್ದರಿಂದ ಗುಣಮಟ್ಟಕ್ಕೆ ಧಕ್ಕೆಯಾಗುತ್ತಿದೆ ಎಂದರು.

ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕುಮಾರ್ ನಾಯಕ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ವೆಂಕಟರಾಜ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ ಅವರು ಸಭೆಯಲ್ಲಿ‌ ಹಾಜರಿದ್ದರು.

ವಿಜ್ಞಾನ ಪದವಿ ಕೋರ್ಸುಗಳಿಗೂ ಸಿಇಟಿ ಅಂಕ ಚಿಂತನೆ
2021ನೇ ಸಾಲಿನಲ್ಲಿ ಪಿಯುಸಿಯ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದಾರೆ. 6ರಿಂದ 7ಲಕ್ಷ ವಿದ್ಯಾರ್ಥಿಗಳು ಪಿಯುಸಿಯಿಂದ ಹೊರಬರುತ್ತಿದ್ದಾರೆ. ಮೊದಲು ಕೊನೆ ಪಕ್ಷ 4 ಲಕ್ಷ ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ವಿದ್ಯಾರ್ಥಿಗಳು ಮಾತ್ರ ಪಾಸಾಗುತ್ತಿದ್ದರು. ಈ ಬಾರಿ ಶೇ.30ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿದ್ದಾರೆ. ಇವರಲ್ಲಿ ಅನೇಕರು ಪದವಿ ಕಾಲೇಜುಗಳಿಗೆ ಸೇರಲಿದ್ದು, ಅಲ್ಲಿನ ವ್ಯವಸ್ಥೆ ಹೆಚ್ಚಿಸುವ ಕೆಲಸ ಮಾಡಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ವಿಜ್ಞಾನ ವಿಭಾಗದಲ್ಲಿ ಗುಣಮಟ್ಟಕ್ಕೆ ಆದ್ಯತೆ ಕೊಡುವ ಉದ್ದೇಶದಿಂದ ಅದಕ್ಕೆ ಸಂಬಂಧಿಸಿದ ಎಲ್ಲ ಪದವಿ ಕೋರ್ಸುಗಳಿಗೆ ಸಿಇಟಿ ಅಂಕಗಳನ್ನು ಆಧರಿಸಿಯೇ ಪ್ರವೇಶ ನೀಡುವ ಯೋಚನೆ ಮಾಡಲಾಗುತ್ತಿದೆ. ಈ ಬಗ್ಗೆ ವಿಸ್ತೃತವಾಗಿ ಚಿಂತಿಸಲಾಗುತ್ತಿದೆ. ಯಾವುದೂ ಅಂತಿಮವಾಗಿಲ್ಲ ಎಂದು ಅವರು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 2nd PUC Final ExamBangaloreCETDCM AshwathnarayanKannada NewsKannada News LiveKannada News OnlineKannada News WebsiteKannada WebsiteLatest News KannadaMinister SureshkumarNews in KannadaNews KannadaState Newsಡಿಸಿಎಂ ಅಶ್ವತ್ಥನಾರಾಯಣದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಬೆಂಗಳೂರುಸಿಇಟಿ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಸಂಘಟಿತ ವರ್ಗದ ಕಾರ್ಮಿಕರಿಗೆ ಸಹಾಯಧನ: ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

Next Post

ಪ್ರಕೃತಿಯ ಆರಾಧನೆ: ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರದು

kalpa News

kalpa News

Next Post
ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಡಾ. ಎನ್. ಸುಧೀಂದ್ರ ಆಯ್ಕೆ

ಪ್ರಕೃತಿಯ ಆರಾಧನೆ: ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರದು

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL