ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋಟ್ಯಂತರ ರೂ. ವಂಚನೆ ಆರೋಪದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ Chaitra Kundapura ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಮ್ ಅವರ ಮನೆಯಲ್ಲಿ ಆಶ್ರಯ ಪಡೆದಿದ್ದರು ಎಂದು ಹೇಳಲಾಗಿದೆ.
ಬಿಜೆಪಿ ಟಿಕೇಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಂದ 7 ಕೋಟಿ ರೂ. ಹಣ ಪಡೆದು ವಂಚನೆ ಮಾಡಿರುವ ಆರೋಪದಲ್ಲಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Also read: ಮಂತ್ರಾಲಯದಲ್ಲಿ ಗುರುರಾಯರ ದರ್ಶನ ಪಡೆದ ಬ್ರಿಟನ್ ಪ್ರಧಾನಿ ಪೋಷಕರು
ಸಿಸಿಬಿ ಪೊಲೀಸರು ಬಂಧಿಸುತ್ತಾರೆ ಎಂಬ ವಿಚಾರ ತಿಳಿದು, ಮುಸ್ಲಿಂ ಲೀಗ್’ನ ಅಂಜುA ಮನೆಯಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಹೇಳಲಾಗಿದ್ದು, ಆಕೆಗೂ ಸಹ ಪೊಲೀಸರು ನೋಟೀಸ್ ನೀಡಿದ್ದಾರೆ.

ಇನ್ನು, ಬಂಧನದ ವೇಳೆ ತನ್ನದೇನೂ ತಪ್ಪಿಲ್ಲ ಎಂದು ವಾದ ಮಾಡಿರುವ ಚೈತ್ರಾ, ನಾನೇನು ತಪ್ಪು ಮಾಡಿಲ್ಲ. ಎಲ್ಲಾ ತಪ್ಪು ಎಫ್’ಐಆರ್ ಆಗಿದೆ. ಹಿಂದೂ ಹೋರಾಟಗಾರರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಟಾರ್ಗೆಟ್ ಮಾಡುತ್ತಿದೆ. ಕಾಂಗ್ರೆಸ್ ಒತ್ತಡದಿಂದಲೇ ಉದ್ದೇಶಪೂರ್ವಕವಾಗಿ ಎಫ್’ಐಆರ್ ಹಾಕಿ, ಅರೆಸ್ಟ್ ಮಾಡಿಸಿದ್ದಾರೆ ಎಂದಿದ್ದಾರೆ ಎಂದು ವರದಿಯಾಗಿದೆ.











Discussion about this post