ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ #Renukaswamy murder case ಸಂಬಂಧಿಸಿದಂತೆ ಬಂಧನದಲ್ಲಿರುವ ನಟ ದರ್ಶನ್ #Actor Darshan ಸೇರಿ ಎಲ್ಲ ಆರೋಪಿಗಳ ಕಸ್ಟಡಿ ಅವಧಿ ಮತ್ತೆ 14 ದಿನ ವಿಸ್ತರಣೆ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಪವಿತ್ರಾ ಗೌಡ, ಎ2 ನಟ ದರ್ಶನ್ ಸೇರಿದಂತೆ ಎಲ್ಲ ಆರೋಪಿಗಳ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಿಂದಲೇ ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲರನ್ನೂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
Also read: ಅಬ್ಬಬ್ಬಾ! ವಾಲ್ಮೀಕಿ ನಿಗಮದ ಹಣದಲ್ಲಿ ಏನೆಲ್ಲಾ ಶೋಕಿ ಮಾಡಿದ್ದಾರೆ ನೋಡಿ | ಅಧಿಕೃತ ಮಾಹಿತಿ
ಸರ್ಕಾರಿ ವಕೀಲರ ಹಾಗೂ ಆರೋಪಿಗಳ ಪರ ವಕೀಲರ ವಾದವನ್ನು ನ್ಯಾಯಾಧೀಶರು ಆಲಿಸಿದರು. ಆದರೆ, ಪ್ರಕರಣದ ಗಂಭೀರತೆಯ ಆಧಾರದಲ್ಲಿ ಜಾಮೀನು ನೀಡಬಾರದು ಎಂಬ ಸರ್ಕಾರಿ ವಕೀಲರ ವಾದ ಹಾಗೂ ದಾಖಲೆಗಳನ್ನು ಪರಿಗಣಿಸಿ ಎಲ್ಲರ ಕಸ್ಟಡಿ ಅವಧಿಯನ್ನು 14 ದಿನ ವಿಸ್ತರಣೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post