ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ.
ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೆ ಒಂದು ದಿನ ಕಾರ್ಯಕ್ರಮವನ್ನು ಸಹ ಮೆಚ್ಚಿದ್ದರು.
ಸ್ವತಃ ಕೃಷಿಕರೂ ಆಗಿರುವ ದರ್ಶನ್ ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚಿಸಿ ತಮ್ಮ ಮನದಿಂಗಿತವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ಇದೀಗ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿ ಆದೇಶಿಸಿದೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post