ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ಬಿಪಿಎಲ್ ಮತ್ತು ಬಿಪಿಎಲ್‌ಯೇತರ ಕುಟುಂಬಗಳಿಗೆ ರಾಜ್ಯ ಸರ್ಕಾರ ನೀಡುವ ಪರಿಹಾರ ಮೊತ್ತದಲ್ಲಿ ಬದಲಾವಣೆ ಮಾಡಲಾಗಿದ್ದು, ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಬದಲಿಗೆ 1.5ಲಕ್ಷ ರೂ. ಹಾಗೂ ಬಿಪಿಎಲ್‌ಯೇತರ ಕುಟುಂಬಕ್ಕೆ 50 ಸಾವಿರ ರೂ. ಪರಿಹಾರ ನೀಡಲು ಸರ್ಕಾರ ಹೊಸದಾಗಿ ಆದೇಶ ಹೊರಡಿಸಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರಿಗೆ ರಾಜ್ಯ ಸರ್ಕಾರದ ಸಂಧ್ಯಾ ಸುರಕ್ಷಾ ಯೋಜನೆಯಡಿ 1 ಲಕ್ಷ ರೂ. ಮತ್ತು ಎಸ್‌ಡಿಆರ್‌ಎಫ್ ನಿಂದ 50 ಸಾವಿರ ರೂ. ಸೇರಿ 1.50 ಲಕ್ಷ ರೂ. ನೀಡಲಾಗುತ್ತದೆ. ಹಾಗೂ ಬಿಪಿಎಲ್ ಕುಟುಂಬದ 1 ಕ್ಕಿಂತ ಹೆಚ್ಚು ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದರೆ ಆಗ ಮೊದಲ ವ್ಯಕ್ತಿಗೆ 1.50 ಲಕ್ಷ ರೂ. ಹಾಗೂ ಉಳಿದವರಿಗೆ 50 ಸಾವಿರ ರೂ. ಪರಿಹಾರ ದೊರೆಯಲಿದೆ.
ಬಿಪಿಎಲ್ ಯೇತರ ಕುಟುಂಬದಲ್ಲಿ ಒಂದು ಅಥವಾ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳು ಮೃತಪಟ್ಟಿದ್ದರೆ ಎಸ್ ಡಿಆರ್ ಎಫ್ ಅಡಿ ಮೃತ ಸಂಖ್ಯೆಗನುಗುಣವಾಗಿ ತಲಾ 50 ಸಾವಿರ ರೂ. ಪಾವತಿಸಲಾಗುತ್ತದೆ. ಎಲ್ಲಾ ತಾಲೂಕು ಕಚೇರಿ, ನಾಡ ಕಚೇರಿ ಮತ್ತು ಬಿಬಿಎಂಪಿ ವ್ಯಾಪ್ತಿಯ ವಾರ್ಡ್ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post