ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಚೆನ್ನೈ |
ಯುಗಾದಿ ಮತ್ತು ರಂಜಾನ್ ಹಬ್ಬದ #Ugadi and Ramzan Festival ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಚೆನ್ನೈ ನಡುವಿನ ರೈಲು ಪ್ರಯಾಣಿಕರಿಗೆ ಇಲಾಖೆ ವಿಶೇಷ ರೈಲು ವ್ಯವಸ್ಥೆ #Special Train Facility ಮಾಡುವ ಮೂಲಕ ಗಿಫ್ಟ್ ನೀಡಿದೆ.
ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲ್ವೆ ನಿಲ್ದಾಣ ಮತ್ತು ಪುರಚ್ಚಿ ತಲೈವರ್ ಡಾ.ಎಂ.ಜಿ.ರಾಮಚಂದ್ರನ್ ಸೆಂಟ್ರಲ್ ರೈಲ್ವೆ ನಿಲ್ದಾಣ (ಚೆನ್ನೈ) ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್’ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ಮಾರ್ಚ್ 28, 2025 ರಂದು, ರೈಲು ಸಂಖ್ಯೆ 07319 ಕೆಎಸ್‌ಆð ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ವಿಶೇಷ ಎಕ್ಸ್’ಪ್ರೆಸ್ ರೈಲು ಕೆಎಸ್’ಆರ್ ಬೆಂಗಳೂರಿನಿಂದ ಬೆಳಿಗ್ಗೆ 08:05ಕ್ಕೆ ಹೊರಟು, ಅದೇ ದಿನ ಮಧ್ಯಾಹ್ನ 2:40ಕ್ಕೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.
Also read: ಉತ್ತಮ ಶಿಕ್ಷಣ, ಸಂಸ್ಕಾರ ನಮ್ಮ ಮೂಲಭೂತ ಮಂತ್ರವಾಗಬೇಕು: ನಿವೃತ್ತ ಸಿಎ ಕಮಲಾಕ್ಷ ಕಾಮತ್
ಮಾರ್ಚ್ 28, 2025 ರಂದು, ರೈಲು ಸಂಖ್ಯೆ 07320 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್- ಬೆಂಗಳೂರು ವಿಶೇಷ ಎಕ್ಸ್’ಪ್ರೆಸ್ ರೈಲು ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಮಧ್ಯಾಹ್ನ 3.40ಕ್ಕೆ ಹೊರಟು, ಅದೇ ದಿನ ರಾತ್ರಿ 10.50ಕ್ಕೆ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲಿನಲ್ಲಿ 1 ಎಸಿ 2-ಟೈರ್ ಬೋಗಿ, 2 ಎಸಿ 3-ಟೈರ್ ಬೋಗಿಗಳು, 11 ಸ್ಲೀಪರ್ ಬೋಗಿಗಳು, 4 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್’ಎಲ್’ಆರ್’ಡಿ ಬೋಗಿಗಳು ಸೇರಿದಂತೆ 20 ಬೋಗಿಗಳು ಇರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post