ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಲ್ಲಿನ ಯಕ್ಷಸಿಂಚನ ಟ್ರಸ್ಟ್ ಪ್ರತಿವರ್ಷ ಯಕ್ಷಗಾನ ಕ್ಷೇತ್ರದಲ್ಲಿ ಅಪರೂಪದ ಸೇವೆ ಸಲ್ಲಿಸಿದ ಮಹನೀಯರಿಗೆ ನೀಡುವ ಸಾರ್ಥಕ ಸಾಧಕ’ ಪ್ರಶಸ್ತಿಯನ್ನು, ಈ ಬಾರಿ ಯಕ್ಷಗಾನದಲ್ಲಿ ನಾಲ್ಕು ದಶಕಗಳ ವಿಶಿಷ್ಟ ಸೇವೆಗಾಗಿ ಚೇರ್ಕಾಡಿ ಮಂಜುನಾಥ ಪ್ರಭು ಅವರಿಗೆ ನೀಡಲು ನಿರ್ಧರಿಸಿದೆ.
ಸೆಪ್ಟೆಂಬರ್ 21ರಂದು ಬೆಂಗಳೂರಿನ ಬಿ.ಪಿ. ವಾಡಿಯಾ ಸಭಾಂಗಣದಲ್ಲಿ ನಡೆಯುವ ಯಕ್ಷಸಿಂಚನದ 16ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅವರು ಅಗರಿ ಭಾಗವತರು, ಶೇಣಿ ಗೋಪಾಲಕೃಷ್ಣ ಭಟ್, ಕುಂಬಳೆ ಸುಂದರರಾಯರು, ತೆಕ್ಕಟ್ಟೆ ಆನಂದ ಮಾಸ್ತರ್, ಕೆರೆಮನೆ ಮಹಾಬಲ ಹೆಗಡೆ, ಕೆರೆಮನೆ ಶಂಭು ಹೆಗಡೆ, ಕೆರೆಮನೆ ಗಜಾನನ ಹೆಗಡೆ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಅರಾಟೆ ಮಂಜುನಾಥ, ಕೋಟ ವೈಕುಂಠ, ಯಾಕ್ಟರ್ ಜೋಶಿ, ಕುಂಜಾಲು ರಾಮಕೃಷ್ಣ ಮೊದಲಾದ ಯP್ಷÀರಂಗದ ಮೇರು ಕಲಾವಿದರೊಂದಿಗೆ ಕೆಲಸ ಮಾಡುವ ಭಾಗ್ಯ ಹೊಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post