ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಸರಳ, ಸಜ್ಜನಿಕೆಯ ರಾಜಕಾರಣಿಯಾಗಿದ್ದ ಆಸ್ಕರ್ ಫೆರ್ನಾಂಡಿಸ್ ಅವರು ಕೇಂದ್ರ ಸಚಿವರಾಗಿ, ಲೋಕಸಭೆ, ರಾಜ್ಯಸಭಾ ಸದಸ್ಯರಾಗಿ ಸಲ್ಲಿಸಿದ ಸೇವೆ ಅನನ್ಯವಾದುದು. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















