ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮಾಜಿ ಕೇಂದ್ರ ಸಚಿವ ಬಾಬು ಗೌಡ ಪಾಟೀಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರೈತ ಹೋರಾಟದಲ್ಲಿ ಮುಂಚೂಣಿ ಯಲ್ಲಿದ್ದ ಅವರು ಏಕಕಾಲಕ್ಕೆ ಎರಡು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅಪರೂಪದ ನಾಯಕ. ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಅವರು ಸದಾ ರೈತಪರ ಚಿಂತನೆಯಲ್ಲಿ ತೊಡಗಿಕೊಂಡು ರೈತರ ಕಲ್ಯಾಣಕ್ಕೆ ಶ್ರಮಿಸಿದರು.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಗ್ರಾಮೀಣ ಪ್ರದೇಶ ಮತ್ತು ಉದ್ಯೋಗ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ತಮ್ಮ ಕ್ಷೇತ್ರದ ಅಭಿವೃದ್ಧಿಯಲ್ಲಿಯೂ ಅವರು ಗಣನೀಯ ಕೊಡುಗೆ ನೀಡಿದ್ದರು. ಅವರ ನಿಧನದಿಂದ ರೈತಪರ ಕಾಳಜಿ ಹೊಂದಿದ್ದ ನಾಯಕರೊಬ್ಬರನ್ನು ಕಳೆದುಕೊಂಡಂತಾಗಿದೆ.
ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post