ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಆಡಳಿತದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉಸ್ತುವಾರಿ ಸಚಿವರ ಜಿಲ್ಲೆಗಳನ್ನು ಬದಲಾಯಿಸಿ ಅಧಿಸೂಚನೆ ಹೊರಡಿಸಲಿದ್ದಾರೆ.
ಇದೇ ಮೊದಲ ಬಾರಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಜಿಲ್ಲೆಗಳಿಗೆ ಬೇರೊಬ್ಬ ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆದಿದೆ. ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದ ಸಚಿವರು ಹಳೇಮೈಸೂರು ಭಾಗದ ಉಸ್ತುವಾರಿಯಾಗಿ ನೇಮಕ ಮಾಡಲಿದ್ದಾರೆ. ರಾಜ್ಯ ಸರ್ಕಾರ ಆಡಳಿತ ಸುಧಾರಣೆ ಹಾದಿಯಲ್ಲಿದ್ದು ಜಿಲ್ಲಾ ಉಸ್ತುವಾರಿ ಮಂತ್ರಿಗಳನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಇನ್ನೂ ಒಂದೆರಡು ದಿನಗಳಲ್ಲಿ ಈ ಪಟ್ಟಿಯು ಹೊರಬರಲಿದೆ.

ಜಿಲ್ಲೆಯ ಹೊರಗಿನ ಮಂತ್ರಿಗಳು ನ್ಯಾಯ ಒದಗಿಸಲು ಮತ್ತು ಎಲ್ಲಾ ಶಾಸಕರನ್ನು ಒಟ್ತಾಗಿ ಕರೆದೊಯ್ಯಲು , ಅಭಿವೃದ್ಧಿಯನ್ನು ಖಾತ್ರಿಪಡಿಸಿಕೊಳ್ಳಲು ಸಾಧ್ಯವಾಗಬಹುದು,ತುಮಕೂರಿನಲ್ಲಿ ಲೋಕಸಭಾ ಸಂಸದ ಜಿ.ಎಸ್. ಬಸವರಾಜು ಅವರು ಪಕ್ಷದೊಳಗೆ ಅಜತಾಶತ್ರು ಪಾತ್ರವನ್ನು ವಹಿಸಲು ಸಾಧ್ಯವಾಗಲಿಲ್ಲ ಮತ್ತು ಎಲ್ಲರನ್ನು ಒಟ್ತಾಗಿ ಸೇರಿಸಿಕೊಂಡು ಕೆಲಸ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಬಿಜೆಪಿ ಶಾಸಕರು ವಿಶ್ವಾಸ ತೋರಿದರೂ ವೈಫಲ್ಯವು ಪಕ್ಷಕ್ಕೆ ಹಾನಿಕಾರಕವಾಗಿದೆ ಎಂದು ಒಬ್ಬ ನಾಯಕ ಹೇಳೀದ್ದಾರೆ.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಲಾಖೆಯಲ್ಲಿ ಕೆಲವು ಅಮೂಲಾಗ್ರ ಬದಲಾವಣೆ ಮಾಡುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಗೆ ಮೈಸೂರು ಜಿಲ್ಲಾ ಉಸ್ತುವಾರಿಯಾಗಿ ನೇಮಕವಾಗಲಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ನಿರಾಣಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.

ನನ್ನ ಮೇಲೆ ವಿಶ್ವಾಸವಿಟ್ಟು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿದರೂ ನನ್ನದೇನೂ ಅಭ್ಯಂತರವಿಲ್ಲ. ಮುಖ್ಯಮಂತ್ರಿ ತೀರ್ಮಾನಕ್ಕೆ ನಾನು ಬದ್ದ ಎಂದು ನಿರಾಣಿ ಹೇಳಿರುವುದಾಗಿ ತಿಳಿದುಬಂದಿದೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post