ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನ.೧೪ರಂದು ತಿರುಪತಿಯಲ್ಲಿ ದಕ್ಷಿಣ ವಲಯದ ಸಮನ್ವಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದೆ. ಈ ಸಭೆಯಲ್ಲಿ ತಾನು ಭಾಗವಹಿಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮ್ಮೇಳನದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳ ಕುರಿತು ಇಂದು ಸಭೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post