ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿನ್ನಿ ಲವ್ ಯೂ, ಯೂ ಮಸ್ಟ್ ಲವ್ ಮೀ ಎಂದು ರಕ್ತದಲ್ಲಿ ಪೊಲೀಸ್ ಇನ್ಸ್’ಪೆಕ್ಟರ್’ಗೆ #Police Inspector ಮಹಿಳೆಯೊಬ್ಬರು ಲವ್ ಲೆಟರ್ ಬರೆದಿರುವ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದೆ.
ರಾಮಮೂರ್ತಿ ನಗರದ ನಿವಾಸಿಯಾಗಿರುವ ವನಜಾ ಎನ್ನುವವರು ಇನ್ಸ್’ಪೆಕ್ಟರ್ ಸತೀಶ್ ಎನ್ನುವವರಿಗೆ ಪದೇ ಪದೇ ಮೆಸೇಜ್ ಮಾಡಿ ಪ್ರೀತಿಸುವಂತೆ ಕಾಟ ಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಒಂದೇ ಅಲ್ಲ, ಬರೋಬ್ಬರಿ 11 ವಿಭಿನ್ನ ಮೊಬೈಲ್ ಸಂಖ್ಯೆಗಳ ಮೂಲಕ ಇನ್ಸ್’ಪೆಕ್ಟರ್’ಗೆ ಕರೆ ಮಾಡಿ ಪ್ರೀತಿ ನಿವೇದನೆ ಮಾಡುತ್ತಿದ್ದಳು. ಈ ಕಾರಣಕ್ಕೆ ಇನ್ಸ್’ಪೆಕ್ಟರ್ ಎಲ್ಲಾ 11 ಸಂಖ್ಯೆಗಳನ್ನೂ ಬ್ಲಾಕ್ ಮಾಡಿದ್ದರು.
ಠಾಣೆಯಲ್ಲಿ ಇನ್ಸ್’ಪೆಕ್ಟರ್ ಇಲ್ಲದ ವೇಳೆಯಲ್ಲಿ ಅವರ ಟೇಬಲ್ ಮೇಲೆ ಲವ್ ಲೆಟರ್ ಜೊತೆಗೆ ಕಜ್ಜಾಯದ ಡಬ್ಬಿ, ಹೂ ಬೊಕೆ ಹಾಗೂ ಎರಡು ಶೀಟ್’ನಲ್ಲಿ ಇಪ್ಪತ್ತು ಮಾತ್ರೆಗಳನ್ನೂ ಇಟ್ಟು ಹೋಗಿದ್ದಾರೆ.
ಅಷ್ಟಕ್ಕೂ ನಿಲ್ಲದ ಮಹಿಳೆ, ಲವ್ ಲೆಟರ್ ಜೊತೆಗೆ ‘Nexito Plus’ ಎಂಬ ಮಾತ್ರೆಯನ್ನು ಕೂಡ ಕಳುಹಿಸಿದ್ದಳು. ನನ್ನ ಪ್ರೀತಿಯನ್ನು ನೀವು ಒಪ್ಪಿಕೊಳ್ಳುತ್ತಿಲ್ಲ, ನಿಮಗೆ ತೊಂದರೆ ಕೊಡಲು ನನಗೆ ಇಷ್ಟವಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಸಾವಿಗೆ ನೀವೇ ಕಾರಣ’ ಎಂದು ಬರೆದು, ಹೃದಯದ ಚಿತ್ರವನ್ನೂ ಬಿಡಿಸಿ, ‘‘Chinni love u, u love me’’ ಎಂದು ರಕ್ತದಲ್ಲಿ ಬರೆದ ಪತ್ರವನ್ನು ಪೋಸ್ಟ್ ಮೂಲಕ ಠಾಣೆಗೆ ಕಳುಹಿಸಿದ್ದಾಳೆ ಎಂಬುದು ಮತ್ತೊಂದು ಗಂಭೀರ ಆರೋಪವಾಗಿದೆ.
ಮಹಿಳೆಯ ಕಾಟಕ್ಕೆ ಬೇಸತ್ತ ಇನ್ಸ್’ಪೆಕ್ಟರ್ ಆಕೆಯ ವಿರುದ್ಧ ಎಫ್’ಐಆರ್ ದಾಖಲಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆ ಬೆದರಿಕೆ ಆರೋಪದಲ್ಲಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















