No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Wednesday, April 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ

ಪ್ರೊ. ಮಾಧವ ಗಾಡ್ಗೀಳ್ ಆತ್ಮಕಥೆ ಏರುಘಟ್ಟದ ನಡಿಗೆ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2025
in ಬೆಂಗಳೂರು ನಗರ
0
ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅದ್ಭುತ ಜೀವವೈವಿಧ್ಯತೆಯ ತಾಣ ಹಾಗೂ ಹಲವು ಪ್ರಮುಖ ನದಿಗಳ ಮೂಲವಾದ ಪಶ್ಚಿಮಘಟ್ಟಗಳ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ #Minister Eshwara Khandre ಅಭಿಪ್ರಾಯಪಟ್ಟಿದ್ದಾರೆ.

ಚಿತ್ರಕಲಾ ಪರಿಷತ್ತಿನಲ್ಲಿಂದು ಪ್ರೊ. ಮಾಧವ ಗಾಡ್ಗೀಳ್ #Prof. Madhava Gadgil ಅವರ ಆತ್ಮಕತೆ A Walk up the Hill ನ ಕನ್ನಡ ಕೃತಿ ‘ಏರುಘಟ್ಟದ ನಡಿಗೆ’ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಡಾ. ಕಸ್ತೂರಿ ರಂಗನ್ ಸಮಿತಿಯ ವರದಿಯಲ್ಲಿ #Dr. Kasturi Rangan Committee Report ಕರ್ನಾಟಕದ ಪಶ್ಚಿಮಘಟ್ಟ ಪ್ರದೇಶ #Westernghats of Karnataka 20,668 ಚ.ಕಿ.ಮೀ. ಪರಿಸರ ಸೂಕ್ಷ್ಮ ಎಂದು ಗುರುತಿಸಿದೆ. ರಾಜ್ಯ ಈಗಾಗಲೇ 16,114 ಚದರ ಕಿ.ಮೀ. ಸಂರಕ್ಷಿಸಿದ್ದು, ಕಸ್ತೂರಿ ರಂಗನ್ ವರದಿಯಲ್ಲಿ ನಮೂದಿಸಿರುವ ವ್ಯಾಪ್ತಿಯ ಶೇ. 83ರಷ್ಟು ಆಗಿರುತ್ತದೆ. ಉಳಿದ 4 ಸಾವಿರ ಚ.ಕಿ.ಮೀ ಅಂದರೆ ಶೇ. 17ರಷ್ಟು ಪ್ರದೇಶದಲ್ಲಿ 39 ತಾಲೂಕುಗಳ ಸುಮಾರು 1449 ಗ್ರಾಮಗಳಿದ್ದು, ಇಲ್ಲಿ ಶಾಲೆ, ಆಸ್ಪತ್ರೆ, ಅಂಗನವಾಡಿ, ವಸತಿ ಪ್ರದೇಶಗಳಿವೆ. ಹೀಗಾಗಿ ಜೀವನ, ಜೀವನೋಪಾಯ ಮತ್ತು ಪರಿಸರ ಸಂರಕ್ಷಣೆ ಎಲ್ಲವನ್ನೂ ಸಮತೋಲಿತವಾಗಿ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದರು.

ಇಂದು ಇಡೀ ವಿಶ್ವ, ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆಯಂತಹ ಸವಾಲು ಎದುರಿಸುತ್ತಿದೆ. ಋತುಮಾನಗಳಲ್ಲಿ ಭಾರೀ ಬದಲಾವಣೆ ಆಗಿದೆ. ಒಂದು ತಿಂಗಳಲ್ಲಿ ಬೀಳಬೇಕಾದ ಮಳೆ ಒಂದು ವಾರದಲ್ಲಿ, ಒಂದು ವಾರದಲ್ಲಿ ಬೀಳುವ ಮಳೆ ಒಂದು ದಿನ ಅಥವಾ ಒಂದು ಗಂಟೆಯಲ್ಲಿ ಬೀಳುತ್ತಿದೆ. ಇಂತಹ ವೈಪರೀತ್ಯಗಳಿಗೆ ಮಾನವನ ದುರಾಸೆ. ಅರಣ್ಯ ನಾಶ, ಪ್ರಕೃತಿ, ಪರಿಸರದ ಮೇಲೆ ಮಾನವ ನಡೆಸುತ್ತಿರುವ ದೌರ್ಜನ್ಯ ಕಾರಣ ಎಂದರು.
ಇದನ್ನು ಮನಗಂಡು ರಾಜ್ಯದ ಹಸಿರು ವ್ಯಾಪ್ತಿ ಹೆಚ್ಚಿಸಲು 2023-24ರ ಸಾಲಿನಲ್ಲಿ 5 ಕೋಟಿ ಸಸಿ ನೆಡುವ ಗುರಿ ಹಾಕಿಕೊಳ್ಳಲಾಗಿತ್ತು. ಆದರೆ ಗುರಿ ಮೀರಿದ ಸಾಧನೆ ಮಾಡಿ 5 ಕೋಟಿ 48 ಲಕ್ಷ ಸಸಿ ನೆಡಲಾಗಿದೆ. 2024-25ರಲ್ಲಿ 3 ಕೋಟಿ ಸಸಿ ನೆಡಲಾಗಿದೆ. ಇವುಗಳ ಪೈಕಿ ಎಷ್ಟು ಬದುಕಿಳಿದಿವೆ ಎಂದು ತಿಳಿಯಲು ಆಡಿಟ್ ಕೂಡ ಮಾಡಿಸಲಾಗಿದ್ದು, ಈ ವಿವರವನ್ನು ಅರಣ್ಯ ಇಲಾಖೆಯ ಅಂತರ್ಜಾಲ ತಾಣದಲ್ಲಿ ಅಪ್ ಲೋಡ್ ಮಾಡಲಾಗಿದೆ ಎಂದು ತಿಳಿಸಿದರು.

Also read: ಜಗತ್ತು AI ಹಿಂದೆ ಓಡುವಾಗ ನಾವು FI ಹಿಂದೆ ಓಡ್ತಾ ಇದೀವಿ: ಕೆ.ವಿ. ಪ್ರಭಾಕರ್

ನಮ್ಮ ಪೂರ್ವಿಕರು ಪ್ರಕೃತಿದತ್ತವಾದ ನೈಸರ್ಗಿಕ ಸಂಪನ್ಮೂಲಗಳನ್ನು ಹಿತಮಿತವಾಗಿ ಬಳಸುತ್ತಿದ್ದರು. ಮರುಬಳಕೆಗೆ ಆದ್ಯತೆ ನೀಡುತ್ತಿದ್ದರು. ಆದರೆ ಇಂದು ಇಡೀ ಜಗತ್ತು ನೈಸರ್ಗಿಕ ಸಂಪನ್ಮೂಲವನ್ನು ಮನಸೋಇಚ್ಛೆ ಬಳಕೆ ಮಾಡುತ್ತಿದೆ. ಈ ಭೂಮಿ, ಈ ಭೂಮಿಯಲ್ಲಿರುವ ನೀರು, ಕಾಡು, ಬೆಟ್ಟ, ಗುಡ್ಡ, ಪರ್ವತ, ನದಿ ಇದ್ಯಾವುದೂ ನಮಗೆ ನಮ್ಮ ಪೂರ್ವಿಕರಿಂದ ಬಂದಿರುವ ಪಿತ್ರಾರ್ಜಿತ ಆಸ್ತಿಯಲ್ಲ. ಬದಲಾಗಿ ನಮ್ಮ ಮುಂದಿನ ಪೀಳಿಗೆ ನಮಗೆ ನೀಡಿರುವ ಸಾಲ. ಇದನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ನಾವೆಲ್ಲರೂ ಸಾಮಾನ್ಯವಾಗಿ ಪರಿಸರ ಎಂದರೆ ಮರ, ಗಿಡ, ಕಾಡು, ಮೇಡು, ವನ್ಯಜೀವಿಗಳಿಗಷ್ಟೇ ಸೀಮಿತವಾಗುತ್ತೇವೆ. ಆದರೆ ಪ್ರೊ. ಗಾಡ್ಗೀಳ್ ಅವರು ಪರಿಸರ ವಿಜ್ಞಾನಿಯಾಗಿ ಪರಿಸರವನ್ನು ನೋಡಿರುವ ದೃಷ್ಟಿಕೋನವೇ ಬೇರೆ ಇದೆ. ಅವರು ಪರಿಸರವನ್ನು ಕಲ್ಲು ಮಣ್ಣಿನಿಂದ ಕೂಡಿದ ಭೂಮಿ, ಬೆಟ್ಟ, ಗುಡ್ಡ, ಈ ಭೂಮಿಯಲ್ಲಿ ಬೆಳೆಯುವ ಸಕಲ ಜೀವರಾಶಿ, ಸಸ್ಯ ಸಂಕುಲ, ಪಕ್ಷಿ ಸಂಕುಲ, ಕೀಟ ಸಂಕುಲ, ಸೂಕ್ಷ್ಮಾಣು ಜೀವಿಗಳು, ನದಿ ಮೂಲಗಳು, ಅರಣ್ಯವಾಸಿಗಳು, ನಾಗರಿಕತೆಯವರೆಗೆ ತಮ್ಮ ವ್ಯಾಪ್ತಿಯನ್ನು ಹಿಗ್ಗಿಸಿಕೊಂಡು ಅಧ್ಯಯನ ನಡೆಸಿದವರು ಎಂದರು.

ಹೀಗಾಗಿಯೇ ಇವರಿಗೆ ವಿಶ್ವಸಂಸ್ಥೆ ಚಾಂಪಿಯನ್ಸ್ ಆಫ್ ದಿ ಅರ್ಥ್ ಪ್ರಶಸ್ತಿ ನೀಡಿ ಗೌರವಿಸಿದೆ. ಪಶ್ಚಿಮ ಘಟ್ಟ ಕುರಿತಂತೆ ಮಾಧವ ಗಾಡ್ಗೀಳ್ ನೇತೃತ್ವದ ಸಮಿತಿ 31.08.2011ರಂದು ನೀಡಿರುವ ವರದಿ, ಅವರೆಲ್ಲರೂ ಕೈಗೊಂಡ ಅಧ್ಯಯನ ಪಶ್ಚಿಮಘಟ್ಟದ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದೆ. ವರದಿ ಸಂಪೂರ್ಣವಾಗಿ ಜಾರಿಗೆ ಬಾರದೆ ಇರಬಹುದು. ಆದರೆ 2012ರ ಜುಲೈನಲ್ಲಿ ಪಶ್ಚಿಮಘಟ್ಟವನ್ನು ಸಂರಕ್ಷಿತ ಪ್ರದೇಶ ಎಂದು ಯುನೆಸ್ಕೋ ಘೋಷಿಸಲು ಇದು ಸಹಕಾರಿಯಾಗಿದೆ ಎಂದು ನಾನು ಭಾವಿಸುತ್ತೇನೆ ಎಂದರು.
ಕಳೆದ 20 ತಿಂಗಳುಗಳಲ್ಲಿ ಬೆಂಗಳೂರು ನಗರ ಒಂದರಲ್ಲೇ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 117 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದೆ. ರಾಜ್ಯದಾದ್ಯಂತ 5 ಸಾವಿರ ಎಕರೆ ಭೂಮಿ ಒತ್ತುವರಿ ತೆರವು ಮಾಡಿಸಲಾಗಿದ್ದು, ತೆರವು ಮಾಡಿಸಲಾದ ಎಲ್ಲ ಅರಣ್ಯ ಭೂಮಿಯಲ್ಲಿ ಗಡಿ ಗುರುತಿಗೆ ಕಂದಕ ತೋಡಿ, ಗಿಡ ನೆಡಲಾಗಿದೆ. ಮತ್ತೆ ಒತ್ತುವರಿ ಆಗದಂತೆ ಎಚ್ಚರ ವಹಿಸಲೂ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಪ್ರೊ ಗಾಡ್ಗೀಳ್ ಅವರ ಆತ್ಮಕಥೆಯನ್ನು ಕನ್ನಡಕ್ಕೆ ಅನುವಾದಿಸಿದ ಪತ್ರಕರ್ತ, ಪರಿಸರ ಪ್ರೇಮಿ ನಾಗೇಶ್ ಹೆಗಡೆ ಮತ್ತು ಶಾರದಾ ಗೋಪಾಲ ಹಾಗೂ ಈ ಗ್ರಂಥ ಹರತಂದಿರುವ ಆಕೃತಿ ಆಶಯ ಪಬ್ಲಿಕೇಷನ್ ಗೆ ಅಭಿನಂದನೆ ಸಲ್ಲಿಸಿದರು. ಶಿಕ್ಷಣ ತಜ್ಞ ಪ್ರೊ. ಕೆ.ಈ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಪತ್ರಕರ್ತ ನಾಗೇಶ್ ಹೆಗಡೆ, ಪರಿಸರ ಚಿಂತಕ ಡಾ. ನರೇಂದ್ರ ರೈ ದೇರ್ಲ, ಕ್ಯಾಪ್ಟನ್ ಜಿ.ಆರ್. ಗೋಪಿನಾಥ್, ಆರ್.ಪಿ.ಇ. ಸೊಸೈಟಿ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ, ಆಕೃತಿ ಆಶಯ ಪ್ರಕಾಶನದ ಕಲ್ಲೂರು ನಾಗೇಶ್ ಮತ್ತಿತರರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: A Walk up the HillBangaloreDr. Kasturi Rangan Committee ReportKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Eshwara KhandreNews_in_KannadaNews_KannadaProf. Madhava GadgilWesternghats of Karnatakaಕರ್ನಾಟಕದ ಪಶ್ಚಿಮಘಟ್ಟ ಪ್ರದೇಶಡಾ. ಕಸ್ತೂರಿ ರಂಗನ್ ಸಮಿತಿಯ ವರದಿಪ್ರೊ. ಮಾಧವ ಗಾಡ್ಗೀಳ್ಬೆಂಗಳೂರುಸಚಿವ ಈಶ್ವರ ಬಿ ಖಂಡ್ರೆ
Share196Tweet123Send
Previous Post

ಜಗತ್ತು AI ಹಿಂದೆ ಓಡುವಾಗ ನಾವು FI ಹಿಂದೆ ಓಡ್ತಾ ಇದೀವಿ: ಕೆ.ವಿ. ಪ್ರಭಾಕರ್

Next Post

ಕರ್ನಾಟಕವು ದೇಶದ ಇಂಧನ ಭವಿಷ್ಯ: ಕೆ.ಜೆ. ಜಾರ್ಜ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕರ್ನಾಟಕವು ದೇಶದ ಇಂಧನ ಭವಿಷ್ಯ: ಕೆ.ಜೆ. ಜಾರ್ಜ್‌

ಕರ್ನಾಟಕವು ದೇಶದ ಇಂಧನ ಭವಿಷ್ಯ: ಕೆ.ಜೆ. ಜಾರ್ಜ್‌

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ನಾರೀಶಕ್ತಿವಂದನಾ ಅಧಿನಿಯಮ ಕಾಯ್ದೆ ಐತಿಹಾಸಿಕ ಹೆಜ್ಜೆ: ಸಂಸದ ರಾಘವೇಂದ್ರ

April 15, 2026
ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

April 15, 2026
ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

April 15, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
ಭಾರತೀಯ ವಾಯುಪಡೆಯೊಂದಿಗೆ ಜಿಇ ಏರೋಸ್ಪೇಸ್ ಒಪ್ಪಂದ 

ಭಾರತೀಯ ವಾಯುಪಡೆಯೊಂದಿಗೆ ಜಿಇ ಏರೋಸ್ಪೇಸ್ ಒಪ್ಪಂದ 

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL